Home P.Cricket ಇಂಟರ್ ನ್ಯಾಷನಲ್ ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​ಗೆ  ಕೊರೋನಾ ದೃಢ

ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​ಗೆ  ಕೊರೋನಾ ದೃಢ

ಥೈಲ್ಯಾಂಡ್ : ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​ಗೆ ಕೊರೋನಾ ಪಾಸಿಟಿವ್ ಆಗಿದೆ ಮತ್ತು  ಅಭಿಮಾನಿಗಳಿಗೆ ಬೇಸರದ ಸಂಗತಿ.ಬ್ಯಾಡ್ಮಿಂಟನ್ ಪಂದ್ಯಾವಳಿಗಾಗಿ ಸೈನಾ ಥೈಲ್ಯಾಂಡ್​ನಲ್ಲಿದ್ದಾರೆ. ಸದ್ಯ ಅಲ್ಲಿಯೇ ಸೈನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಬಂದಿರುವುದು ಸೈನಾ ನೆಹ್ವಾಲ್​ಗೆ ದೊಡ್ಡ ಹಿನ್ನೆಡೆಯಾಗಿದೆ. ಯೊನೆಕ್ಸ್ ಥೈಲ್ಯಾಂಡ್ ಓಪನ್ ಜನವರಿ 12 ರಿಂದ 17 ರವರೆಗೆ ನಡೆಯಲಿದೆ. ಇದರ ನಂತರ ಟೊಯೋಟಾ ಥೈಲ್ಯಾಂಡ್ ಓಪನ್ ಜನವರಿ 19 ರಿಂದ 24 ರವರೆಗೆ ನಡೆಯಲಿದೆ. ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಾಲ್ಸ್ ಜನವರಿ 27 ರಿಂದ 31 ರವರೆಗೆ ನಡೆಯಲಿದೆ. ಆದ್ರೆ ಸೈನಾಗೆ ಕೊರೋನಾ ಕಾಣಿಸಿಕೊಂಡ ಕಾರಣ ಅವರಿಗೆ ವಿಶ್ರಾಂತಿ ಸಾಮಾಜಿಕ ಅಂತರ ಅನಿವಾರ್ಯವಾಗಿದೆ.ಈಗ ಕೊರೋನಾ ಕಾಣಿಸಿಕೊಂಡ ಹಿನ್ನೆಲೆ 30 ವರ್ಷದ ಸೈನಾ ಪಂದ್ಯದಿಂದ ಹೊರಗುಳಿಯುವುದು ಅನಿವಾರ್ಯವಾಗಿದೆ.              

LEAVE A REPLY

Please enter your comment!
Please enter your name here

- Advertisment -

Most Popular

‘ಗದಗನಲ್ಲಿ ಕಾಲೇಜ್ ಓಪನ್ ರೂಲ್ಸ್ ಬ್ರೇಕ್’

ಗದಗ: 10 ತಿಂಗಳ ನಂತರ ರಾಜ್ಯದಲ್ಲಿ ಪದವಿ ಕಾಲೇಜುಗಳು ಸಂಪೂರ್ಣ ಆರಂಭವಾಗಿವೆ. ಆದರೆ ಗದಗ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸರ್ಕಾರದ ಕೊರೋನಾ ರೂಲ್ಸ್ ಗಳು ಪಾಲನೆ ಆಗುತ್ತಿಲ್ಲ. ಚಿಕ್ಕ...

‘ವಿಶ್ವ ಹಿಂದು ಪರಿಷತ, ಭಜರಂಗದಳ ನೇತೃತ್ವದಲ್ಲಿ ನಿಧಿ ಸಂಗ್ರಹಣೆ’

ಗದಗ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಗದಗ ಜಿಲ್ಲೆಯಲ್ಲಿ ಕೂಡ ನಿಧಿ ಸಂಗ್ರಹಣೆ ಕಾರ್ಯ ನಡೆಯಿತು. ವಿಶ್ವ ಹಿಂದು ಪರಿಷತ, ಭಜರಂಗದಳ ನೇತೃತ್ವದಲ್ಲಿ ನಿಧಿ ಸಂಗ್ರಹಣೆಗೆ ಮುಂದಾಗಿದ್ದಾರೆ. ನಗರದ ಜೋಡು ಮಾರುತೇಶ್ವರ ದೇವಸ್ಥಾನದಲ್ಲಿ...

ಸಿಎಂ ಅವರ ಸಿಡಿ ಇದ್ರೆ ಕೊಡಿ, ಸುಮ್ನೆ ಹೆದರಿಸುವದು ಏಕೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜಕಾರಣದಲ್ಲಿ ಆಸೆ ಇರುವದು ತಪ್ಪಲ್ಲ. ಆದರೆ ಬಹಿರಂಗ ಹೇಳಿಕೆ ನೀಡುವದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಶಾಸಕ ಅಸಮಾಧಾನವನ್ನು ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಆದರೆ...

‘ಹುಬ್ಬಳ್ಳಿ ಚನ್ನಮ್ಮ ವೃತ್ತದ ಮೇಲು ರಸ್ತೆ ನಿರ್ಮಾಣ ಶಿಲಾನ್ಯಾಸ’

ಹುಬ್ಬಳ್ಳಿ: 298 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 63, 218 ಹಾಗೂ 4 ನ್ನು ಸಂಪರ್ಕಿಸುವ 3.6 ಕೀ.ಮೀ ಉದ್ದದ ಚೆನ್ನಮ್ಮ ವೃತ್ತದ ಮೇಲು ರಸ್ತೆ, 25 ಕೋಟಿ ವೆಚ್ಚದಲ್ಲಿ ಕಲಘಟಗಿ ರಾಷ್ಟ್ರೀಯ...

Recent Comments