Saturday, May 28, 2022
Powertv Logo
Homeರಾಜ್ಯರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಲೇ ಇದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 390 ಕ್ಕೆ ಏರಿಕೆಯಾಗಿದೆ. ನಿನ್ನೆ ಸಂಜೆಯಿಂದ ಇದೂವರೆಗೂ 6 ಮಂದಿಗೆ ಸೋಂಕು ತಗುಲಿದ್ದು, ಮೈಸೂರಿನಲ್ಲಿ 4 ಪ್ರಕರಣಗಳು ಹಾಗೂ ಮಂಗಳೂರಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ16ಕ್ಕೆ ಏರಿದೆ. ಇಂದು ಮಂಗಳೂರು ಹಾಗೂ ಬೆಂಗಳೂರಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಮಂಗಳೂರಿನಲ್ಲಿ ಕೊರೋನಾ ರಣಕೇಕೆಗೆ ಮೊದಲ ಬಲಿಯಾಗಿದ್ದು, ಮೃತ ಮಹಿಳೆಯ ಮಗ ಮಾರ್ಚ್ 16 ರಂದು ದುಬೈನಿಂದ ಬಂದಿದ್ದರು. ಸದ್ಯ ಮಹಿಳೆಯ ಪತಿ, ಮಗ ಹಾಗೂ ಅತ್ತೆಯನ್ನು ಕ್ವಾರಂಟೈನ್ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ತೀವ್ರ ನಿಗಾ ವಹಿಸಲಾಗಿದೆ.

ಬೆಂಗಳೂರಿನಲ್ಲಿ ಕೊರೋನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಹಳೆಗುಡ್ಡದಹಳ್ಳಿಯ 65 ವರ್ಷದ ಮಹಿಳೆ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 16 ಕ್ಕೆ ಏರಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments