ದೇಶದಲ್ಲಿ ಸಾವಿರದ ಗಡಿ ಸೋಂಕಿತರ ಸಾವಿನ ಸಂಖ್ಯೆ : ಕೇವಲ 24 ಗಂಟೆಯಲ್ಲಿ  1,813 ಜನರಲ್ಲಿ ಸೋಂಕು ದೃಢ

0
325

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,813 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟು 31,787 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಕಳೆದ 24  ಗಂಟೆಯಲ್ಲಿ 71 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ  ಈವರೆಗೆ ಒಟ್ಟು 1,008 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಯೂ ಹೆಚ್ಚಾಗಿದ್ದು, 7,797 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ರಾಜ್ಯ ಮಹಾರಾಷ್ಟ್ರದಲ್ಲಿ ಕೇಲವ 24  ಗಂಟೆಯಲ್ಲಿ 728 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,318 ಕ್ಕೆ ಏರಿಕೆಯಾಗಿದೆ. ಇನ್ನು ಸಾವನ್ನಪ್ಪಿದವರ ಸಂಖ್ಯೆಯೂ ಏರುತ್ತಿದ್ದು, ಒಂದೇ ದಿನದಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟು 400 ಮಂದಿ ಮೃತಪಟ್ಟಿದ್ದಾರೆ.

ದೇಶದ ಸೋಂಕಿತರ ಪಟ್ಟಿಯಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನವನ್ನು ಗುಜರಾತ್ ಪಡೆದುಕೊಂಡಿದೆ. ಗುಜರಾತ್​​ನಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೇವಲ 24 ಗಂಟೆಯಲ್ಲಿ 226 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈವರೆಗೆ 3,774 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯು 19 ರಷ್ಟು ಏರಿಎಕಯಾಗಿದ್ದು, ಒಟ್ಟು 181 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇನ್ನು ಮೂರನೇ ಸ್ಥಾನವನ್ನು ಪಡೆದುಕೊಂಡಿರುವ ದೆಹಲಿಯಲ್ಲಿ ಒಂದೇ ದಿನದಲ್ಲಿ 206 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 3 ಸಾವಿರದ ಗಡಿ ದಾಟಿದೆ. ಇನ್ನು ಸಾವನ್ನಪ್ಪಿದವರ  ಸಂಖ್ಯೆ 54 ಆಗಿದ್ದು, ಸ್ಥಿರವಾಗಿದೆ.

LEAVE A REPLY

Please enter your comment!
Please enter your name here