ನವದೆಹಲಿ: ದೇಶಾದ್ಯಾಂತ ಜನರ ನಿದ್ದೆಗೆಡಿಸಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ. 28 ಜನರಲ್ಲಿ ಡೆಡ್ಲಿ ಸೋಂಕು ಪತ್ತೆಯಾಗಿದೆ.
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ದೇಶದ ಎಲ್ಲಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡುತ್ತಿದ್ದು, ವಿದೇಶದಿಂದ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಇಟಲಿಯಿಂದ ಬಂದ 17 ಜನರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ದೆಹಲಿಯ ಐಟಿಬಿಪಿ ಕ್ಯಾಂಪ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಅಲ್ಲದೆ ಇರಾನ್ನಲ್ಲಿ ಲ್ಯಾಬ್ ತೆರೆಯಲು ಭಾರತ ಸರ್ಕಾರ ಚಿಂತನೆ ಮಾಡಿದ್ದು, ಈ ಬಗ್ಗೆ ಇರಾನ್ ಸರ್ಕಾರದ ಜೊತೆ ಮಾತುಕತೆ ನಡೆಸಿದೆ.