ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ವೈದ್ಯರಿಗೂ ಕೊರೋನಾ ವೈರಸ್

0
1201

ಕಲಬುರಗಿ: ದೇಶದಲ್ಲಿ ಮಹಾಮಾರಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೂ 11ಕ್ಕೆ ಏರಿದೆ. ಇದೀಗ ಕೊರೋನಾ ವೈರಸ್​ಗೆ ಪ್ರಥಮ ಬಲಿಯಾದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇತ್ತೀಚೆಗೆ ಕಲಬುರಗಿಯಲ್ಲಿ 63 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಾಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೋಂಕು ತಗುಲಿದೆ. ವೃದ್ಧನಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದ ಹಿನ್ನೆಲೆ ವೃದ್ಧನನ್ನು ಆತನ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಈಗ ವೃದ್ಧನಿಗೆ ಚಿಕಿತ್ಸೆ ಮಾಡಿದ ವೈದ್ಯರಿಗೂ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಹಾಗಾಗಿ ಅವರನ್ನು ಅವರ ಮನೆಯಲ್ಲಿರಿಸಿದ್ದು, ಬಳಿಕ ಇಎಸ್​ಐ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಐಸೋಲೇಟೆಡ್ ವಾರ್ಡ್​ಗೆ ರವಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಶರತ್ ಹೇಳಿದ್ದಾರೆ. ವೈದ್ಯರೊಂದಿಗೆ ಸಂಪರ್ಕದಲ್ಲಿರುವವರನ್ನೂ ಹಾಗೂ ಅವರು ಕುಟುಂಬದವರನ್ನು ಮನೆಯಲ್ಲೇ ಇರಿಸಿ ಐಸೋಲೇಟೆಡ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here