ಬೆಂಗಳೂರು : ರಾಜ್ಯದಲ್ಲಿ ಪತ್ತೆಯಾದ ಮೊದಲ ಕೊರೋನಾ ಪೀಡಿತ ಟೆಕ್ಕಿ ಹಾಗೂ ಅವರ ಕುಟುಂಬ ಗುಣಮುಖವಾಗಿದ್ದಾರೆ.
ಅಮೆರಿಕಾದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದ ಹಿನ್ನೆಲೆ ಅವರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರ ಕುಟುಂಬದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಆದರೆ ಇದೀಗ ಅವರೆಲ್ಲರೂ ಸೋಂಕಿನಿಂದ ಗುಣಮುಖವಾಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆ ವೈದ್ಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.