Home ರಾಜ್ಯ ರಾಜ್ಯದಲ್ಲೂ ಜಾರಿಯಾಗುತ್ತಾ ಕೊರೋನಾ ವಿಕೆಂಡ್ ಲಾಕ್​ಡೌನ್​​?

ರಾಜ್ಯದಲ್ಲೂ ಜಾರಿಯಾಗುತ್ತಾ ಕೊರೋನಾ ವಿಕೆಂಡ್ ಲಾಕ್​ಡೌನ್​​?

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೋನಾ ವಿಕೆಂಡ್ ಲಾಕ್ ಡೌನ್ ಜಾರಿಯಾಗುವ ಸಂಭವ ಇದೆ. ಉಪ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗುವ ಸಾದ್ಯತೆ ಇದೆ.

ಭಾನುವಾರ ನಡೆಯುವ ಸರ್ವಪಕ್ಷಸಭೆ ಬಳಿಕ ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ವಾರಂತ್ಯಕ್ಕೆ 2 ದಿನ ಲಾಕ್ ಡೌನ್ ಮಾಡುವ ಸಂಭವ ಇದೆ. ವಿಪಕ್ಷಗಳ ಅಭಿಪ್ರಾಯ ಪಡೆದುಕೊಂಡು ಕೊವಿಡ್ ಕಂಟ್ರೋಲ್ ಗೆ ಹೊಸ ರೂಲ್ಸ್ ಜಾರಿ ಮಾಡಕಲಾಗುತ್ತದೆ.

ಈಗಾಗಲೇ ರಾಜ್ಯ ಸರ್ಕಾರ 8 ನಗರ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಬೆಂಗಳೂರು, ಮೈಸೂರು, ಬೀದರ್, ಮಂಗಳೂರು, ಕಲಬುರಗಿ, ಉಡುಪಿ, ಮಣಿಪಾಲ್, ತುಮಕೂರು ನಗರ ಪ್ರದೇಶದಲ್ಲಿ ಏಪ್ರಿಲ್ 20ರವರೆಗೆ ನೈಟ್ ಕರ್ಫ್ಯೂ ಜಾರಿಯಲಿದೆ.

ಬಹುತೇಕ್ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ವಿಕೆಂಡ್ ಲಾಕ್ ಡೌನ್ ಮಾಡುವ ಚಿಂತನೆ ನಡೆಸಿದೆ. ಕೊವಿಡ್ ವೈರಸ್ ನಿಯಂತ್ರಣಕ್ಕೆ ಹಲವು ರಾಜ್ಯಗಳಲ್ಲಿ ಹಲವು ರೀತಿಯ ಕ್ರಮ ಜಾರಿ ಮಾಡಲಾಗುತ್ತದೆ. ಮಹಾರಾಷ್ಟ್ರದಲ್ಲಿ 15 ದಿನ ಜನತಾ ಕರ್ಫ್ಯೂ, ದೆಹಲಿಯಲ್ಲಿ ವಿಕೆಂಡ್ ಲಾಕ್ ಡೌನ್ ಮಾಡಲಾಗಿದೆ.

ಹರಿಯಾಣದಲ್ಲಿ 15 ದಿನಗಳ ಕಾಲ ನೈಟ್ ಕರ್ಫ್ಯೂ, ರಾಜಸ್ಥಾನದಲ್ಲಿ 15 ದಿನ ಮಿನಿ ಲಾಕ್​. ಉತ್ತರ ಪ್ರದೇಶ, ಮಧ್ಯ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಕೊರೋನಾ ನೈಟ್ ಕರ್ಫ್ಯೂ ಜಾರಿ. ನೆರೆಯ ತಮಿಳುನಾಡಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿ ಜಾರಿ. ನೆರೆಯ ರಾಜ್ಯಗಳ ಪರಿಸ್ಥತಿ, ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಕಠಿಣ ಬಿಗಿ ಕ್ರಮ. ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಬರೋಬ್ಬರಿ ಒಂದು ಲಕ್ಷ ಕೊರೊನಾ ಕೇಸ್ ದಾಖಲಾಗಿವೆ.

 

 

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments