Home ದೇಶ-ವಿದೇಶ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,500 ಜನರಲ್ಲಿ ಸೋಂಕು ದೃಢ : ಸೋಂಕಿತರ  ಸಂಖ್ಯೆ 42,500ಕ್ಕೆ...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,500 ಜನರಲ್ಲಿ ಸೋಂಕು ದೃಢ : ಸೋಂಕಿತರ  ಸಂಖ್ಯೆ 42,500ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ತನ್ನ ಕದಂಬಬಾಹು ಚಾಚುತ್ತಲೇ ಇದೆ. ಕೇವಲ 24 ಗಂಟೆಯಲ್ಲಿ 2,553 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 42,533 ಜನರಲ್ಲಿ ಸೋಂಕು ಕಂಡುಬಂದಿದೆ. ಇನ್ನು ಸಾವನ್ನಪ್ಪಿದವರ ಸಂಖ್ಯೆ 1,323 ಕ್ಕೆ ಏರಿಕೆಯಾಗಿದೆ . ಇದರ ನಡುವೆ 11,7087 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು12,974 ಜನರಲ್ಲಿ ಸೋಂಕು ಪತ್ತೆಯಾದ್ದು, ಕೇವಲ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 678 ರಷ್ಟು ಏರಿಕೆಯಾಗಿದೆ. ಇನ್ನು 27 ಮಂದಿ ಸಾವನ್ನಪ್ಪಿದ್ದು, ಒಟ್ಟು 548 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.ಈ ಮಧ್ಯೆ ಗುಣಮುಖರಾದವರ ಸಂಖ್ಯೆ 2 ಸಾವಿರಕ್ಕೆ ಏರಿಕೆಯಾಗಿದೆ. ಗುಜರಾತ್​ನಲ್ಲಿ ಸೊಂಕಿತರ ಸಂಖ್ಯೆ 5,428 ಕ್ಕೆ ಏರಿಕೆಯಾಗಿದ. ಕೇವಲ 24 ಗಂಟೆಯಲ್ಲಿ ಗುಜರಾತ್​ನಲ್ಲಿ 374 ಜನರಲ್ಲಿ ಸೋಂಕು ಕಂಡುಬಂದಿದೆ. ಮೃತಪಟ್ಟವರ ಸಂಖ್ಯೆಯೂ 290 ಕ್ಕೇರಿದ್ದು, ಒಂದೇ ದಿನದಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 4,549 ಕ್ಕೇರಿದ್ದು, ನಿನ್ನೆಯಿಂದ ಇವತ್ತಿಗೆ 427 ಜನರಲ್ಲಿ ಸೋಂಕು ಕಂಡುಬಂದಿದೆ. ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದ ಯಾವುದೇ ಪ್ರಕರಣವು ಪತ್ತೆಯಾಗಿಲ್ಲ. ಆದರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಸಾವಿರದ ಗಡಿ ದಾಟಿದೆ.

ಇನ್ನು ಕರ್ನಾಟಕದಲ್ಲಿ  ಭಾನುವಾರ ಒಂದೇ ದಿನ 34 ಜನರಲ್ಲಿ ಸೋಂಕು ಪತ್ತೆಯಾಗಿದೆ. ನಿನ್ನೆಯ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 13 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಹೆಲ್ತ್ ಬುಲೆಟಿನ್​ನಲ್ಲಿ ಪ್ರಕಟವಾಗದ 21 ಕೇಸ್​ಗಳು  ದಾವಣಗೆರೆಯಲ್ಲಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 635 ಪ್ರಕರಣಗಳು ದೃಢಪಟ್ಟಿದೆ.  

LEAVE A REPLY

Please enter your comment!
Please enter your name here

- Advertisment -

Most Popular

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ...

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

Recent Comments