Home ರಾಜ್ಯ ‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100 ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆಯನ್ನು ವಿತರಣೆ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಬಸವರಾಜ್ ಮತ್ತಿಮಡು, ಡಿಸಿ ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ ಸಿಇಓ ಪಿ.ರಾಜಾ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ  ಜಿ.ಪಂ ಉಪಾಧ್ಯಕ್ಷ  ಸೋಮಶೇಖರ್​​ರಿಂದ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಡಿ ದರ್ಜೆ ಸಿಬ್ಬಂದಿ ಗುರಮ್ಮಗೆ ಮೊದಲ ಕೊರೋನಾ ಲಸಿಕೆ ನೀಡಲಾಯಿತು. ಜಿಲ್ಲಾಸ್ಪತ್ರೆ ಸೇರಿದಂತೆ 9 ಕೇಂದ್ರಗಳಲ್ಲಿ ಲಸಿಕೆ ಹಂಚಿಕೆ.  ಪ್ರತಿ ಕೇಂದ್ರದಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತದೆ ಎಂದರು.

ಗದಗ ಜಿಲ್ಲೆಯಲ್ಲಿ ಕೆ.ಸಿ.ರಾಣಿ ರಸ್ತೆಯಲ್ಲಿನ  ಮಾನ್ವಿ ಮಹಿಳಾ & ಮಕ್ಕಳ ಆಸ್ಪತ್ರೆ 3 ಜನ ಕೊರೋನಾ ವಾರಿಯರ್ಸ್​​ಗೆ ಕೊವಿಡ್ ಲಸಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ 7 ಕೇಂದ್ರದಲ್ಲಿ ಇಂದು 700 ಜನರಿಗೆ ಲಸಿಕೆ ನೀಡಲಾಗುತ್ತದೆ. ಜಿಮ್ಸ್ ಆಸ್ಪತ್ರೆ ಸಿಬ್ಬಂದಿಗೆ ಕೊವಿಡ್ ಲಸಿಕೆ ಹಾಕಿ ನರ್ಸ್ ಚಪ್ಪಾಳೆ ತಟ್ಟುವ ಮೂಲಕ ವ್ಯಾಕ್ಸಿನ್ ಕಾರ್ಯಕ್ಕೆ ಆರಂಭ. ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಬೂಸರೆಡ್ಡಿ ಸೇರಿ ಹಲವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments