Home ದೇಶ-ವಿದೇಶ 'ವೆರಿಗುಡ್ ಹೀಗೆ ತನಿಖೆ ಮಾಡುತ್ತಲೇ ಇರಿ' - ಕಲಬುರ್ಗಿ ಕೇಸ್ ಬಗ್ಗೆ ಸುಪ್ರೀಂ ಅಸಮಾಧಾನ..!

‘ವೆರಿಗುಡ್ ಹೀಗೆ ತನಿಖೆ ಮಾಡುತ್ತಲೇ ಇರಿ’ – ಕಲಬುರ್ಗಿ ಕೇಸ್ ಬಗ್ಗೆ ಸುಪ್ರೀಂ ಅಸಮಾಧಾನ..!

ವಿಚಾರವಾದಿ ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ತನಿಖೆ ವಿಳಂಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಗರಂ ಆಗಿದ್ದು, ‘ವೆರಿಗುಡ್ ಹೀಗೆ ತನಿಖೆ ಮಾಡುತ್ತಲೇ ಇರಿ’ ಅಂತ ಅಸಮಾಧಾನ ವ್ಯಕ್ತಪಡಿಸಿದೆ.
ಎಂ.ಎಂ ಕಲಬುರ್ಗಿಯವರ ಹತ್ಯೆಯಾಗಿ 3 ವರ್ಷಗಳಾದ್ರೂ ಇನ್ನೂ ಆರೋಪಿಗಳನ್ನು ಪತ್ತೆ ಹಚ್ಚದಿರೋದು ಸುಪ್ರೀಂಕೋರ್ಟ್ ಗರಂ ಆಗಲು ಕಾರಣ. ”ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಏನೂ ಮಾಡಿಲ್ಲ. ತನಿಖೆ ಮಾಡೋಕೆ ಇನ್ನೆಷ್ಟು ದಿನ ಬೇಕು? ವೆರಿಗುಡ್ ಹೀಗೆ ತನಿಖೆ ಮಾಡುತ್ತಲೇ ಇರಿ ಎಂದು ಸುಪ್ರೀಂಕೋರ್ಟ್​ ಸರ್ಕಾರದ ಮಂದಗತಿ ದೋರಣೆಯನ್ನು ವ್ಯಂಗ್ಯ ಮಾಡಿದೆ. ಎರಡು ವಾರದೊಳಗಾಗಿ ತನಿಖೆ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿರೋ ಕೋರ್ಟ್​ ನಂತರ ಆದೇಶ ನೀಡುವುದಾಗಿ ನ್ಯಾ.ರೊಹಿಂಟನ್ ನಾರಿಮನ್ ನೇತೃತ್ವದ ದ್ವಿಸದಸ್ಯ ಪೀಠ ತಿಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments