Sunday, June 26, 2022
Powertv Logo
Homeದೇಶದೇಶದಲ್ಲಿ ಕೇವಲ 24 ಗಂಟೆಯಲ್ಲಿ 2,293 ಜನರಲ್ಲಿ ಸೋಂಕು ದೃಢ : ಸೋಂಕಿತರ ಸಂಖ್ಯೆ 37...

ದೇಶದಲ್ಲಿ ಕೇವಲ 24 ಗಂಟೆಯಲ್ಲಿ 2,293 ಜನರಲ್ಲಿ ಸೋಂಕು ದೃಢ : ಸೋಂಕಿತರ ಸಂಖ್ಯೆ 37 ಸಾವಿರಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇವಲ 24 ಗಂಟೆಯಲ್ಲಿ 2,293 ಜನರಲ್ಲಿ ಸೋಂಕು ಪತ್ತೆಯಾಗಿದೆ.ಈ ಮೂಲಕ ಸೋಂಕಿತರ ಸಂಖ್ಯೆ 37,336 ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿನ್ನೆಯಿಂದ ಇಂದಿಗೆ ಒಟ್ಟು 71 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ 1,218 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರು ಹಾಗೂ ಸೊಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿರುವುದರ ನಡುವೆ 9,951 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,008 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಒಟ್ಟು 11,506 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಲ್ಲಿ ಸಾವನ್ನಪ್ಪಿದವರ ಸಂಖ್ಯೆ 485 ಕ್ಕೇರಿದ್ದು, ಒಂದೇ ದಿನ 26 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್​ನಲ್ಲಿ ಸೋಂಕಿತರ ಸಂಖ್ಯೆ  4,721 ಕ್ಕೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 326 ಜನರಲ್ಲಿ ಸೋಂಕು ಪತ್ತೆಯಾಗಿದೆ.22 ಜನ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 236 ಜನ ಮೃತಪಟ್ಟಿದ್ದಾರೆ. ಇನ್ನು ದೆಹಲಿಗೆ ಬಂದರೆ ಸೋಂಕಿತರ ಸಂಖ್ಯೆ ಕೇವಲ 24 ಗಂಟೆಯಲ್ಲಿ 223 ರಷ್ಟು ಏರಿಕೆ ಕಂಡಿದ್ದು, ಈವರೆಗೆ ಒಟ್ಟು 3,738 ಜನರಲ್ಲಿ ಸೋಂಕು ದೃಢಪಟ್ಟಿದೆ. ದೆಹಲಿಯಲ್ಲಿ 2 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 61 ಕ್ಕೆ ಏರಿಕೆಯಾಗಿದೆ.

ಇನ್ನು ಕರ್ನಾಟಕ ಶುಕ್ರವಾರ ಒಂದೇ ದಿನದಲ್ಲಿ 24 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 589ಕ್ಕೆ ಏರಿದೆ. ಇನ್ನು 22 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರ ನಡುವೆ ಈವರೆಗೆ ಒಟ್ಟು 251 ಜನ ಸೋಂಕಿತರು ಗುಣಮುಖರಾಗಿದ್ದಾರೆ.

1 COMMENT

LEAVE A REPLY

Please enter your comment!
Please enter your name here

- Advertisment -

Most Popular

Recent Comments