Home ದೇಶ-ವಿದೇಶ ಕಳೆದ 24 ಗಂಟೆಯಲ್ಲಿ 3,500 ಜನರಲ್ಲಿ ಕೊರೋನಾ ಪತ್ತೆ : ದೇಶದಲ್ಲಿ ಸೋಂಕಿತರ ಸಂಖ್ಯೆ 52,952...

ಕಳೆದ 24 ಗಂಟೆಯಲ್ಲಿ 3,500 ಜನರಲ್ಲಿ ಕೊರೋನಾ ಪತ್ತೆ : ದೇಶದಲ್ಲಿ ಸೋಂಕಿತರ ಸಂಖ್ಯೆ 52,952 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ತನ್ನ ಕದಂಬಬಾಹು ಚಾಚುತ್ತಲೇ ಇದೆ. ಕೇವಲ 24 ಗಂಟೆಯಲ್ಲಿ 3,561ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 52,952 ಜನರಲ್ಲಿ ಸೋಂಕು ಕಂಡುಬಂದಿದೆ. ಇನ್ನು ಸಾವನ್ನಪ್ಪಿದವರ ಸಂಖ್ಯೆ 1,783 ಕ್ಕೆ ಏರಿಕೆಯಾಗಿದೆ. ಇದರ ನಡುವೆ 15,267 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು16,758 ಜನರಲ್ಲಿ ಸೋಂಕು ಪತ್ತೆಯಾದ್ದು, ಕೇವಲ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 1,233 ರಷ್ಟು ಏರಿಕೆಯಾಗಿದೆ. ಇನ್ನು 34 ಮಂದಿ ಸಾವನ್ನಪ್ಪಿದ್ದು, ಒಟ್ಟು 651 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.ಈ ಮಧ್ಯೆ ಗುಣಮುಖರಾದವರ ಸಂಖ್ಯೆ 3 ಸಾವಿರಕ್ಕೆ ಏರಿಕೆಯಾಗಿದೆ. ಗುಜರಾತ್​ನಲ್ಲಿ ಸೊಂಕಿತರ ಸಂಖ್ಯೆ 6,625 ಕ್ಕೆ ಏರಿಕೆಯಾಗಿದೆ. ಕೇವಲ 24 ಗಂಟೆಯಲ್ಲಿ ಗುಜರಾತ್​ನಲ್ಲಿ 380 ಜನರಲ್ಲಿ ಸೋಂಕು ಕಂಡುಬಂದಿದೆ. ಮೃತಪಟ್ಟವರ ಸಂಖ್ಯೆಯೂ 396 ಕ್ಕೇರಿದ್ದು, ಒಂದೇ ದಿನದಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 5,532 ಕ್ಕೇರಿದ್ದು, ನಿನ್ನೆಯಿಂದ ಇವತ್ತಿಗೆ 428 ಜನರಲ್ಲಿ ಸೋಂಕು ಕಂಡುಬಂದಿದೆ. ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಸೋಂಕಿನಿಂದ ಒಬ್ಬ ಸಾವನ್ನಪ್ಪಿದ್ದು, ಸಾವಿಗೀಡಾದವರ ಸಂಖ್ಯೆ 65 ಕ್ಕೇರಿಕೆಯಾಗಿದೆ. ಇದರ ನಡುವೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಸಾವಿರದ ಗಡಿ ದಾಟಿದ್ದು, 1,542 ಕ್ಕೇರಿಕೆಯಾಗಿದೆ. 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments