Tuesday, September 27, 2022
Powertv Logo
Homeರಾಜ್ಯಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಮೊದಲ ಬಲಿ ಪಡೆದ ಕೊರೋನಾ ವೈರಸ್

ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಮೊದಲ ಬಲಿ ಪಡೆದ ಕೊರೋನಾ ವೈರಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಮೊದಲ ಬಲಿ ಪಡೆದಿದೆ. ಚನ್ನಗಿರಿ ಮೂಲದ ಸುಮಾರು 70 ವರ್ಷದ ವೃದ್ಧ ಮಹಿಳೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ.

ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.  ಕಳೆದ ಮೂರು ದಿನಗಳ ಹಿಂದೆಯಷ್ಟೇ ಮೆಗ್ಗಾನ್ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೃತಪಟ್ಟ ನಂತರ ಕೋವಿಡ್-19 ಸೋಂಕು ತಗುಲುವುದು ವರದಿಯಲ್ಲಿ ಧೃಢಪಟ್ಟಿರುವುದಾಗಿ ತಿಳಿದು ಬಂದಿದೆ.

ಇವರು ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಗುರುವಾರ , ಶುಕ್ರವಾರ  ಚಿಕಿತ್ಸೆ ಪಡೆದು, ನಂತರ ಶನಿವಾರ ಚನ್ನಗಿರಿಯ  ಖಾಸಗಿ ಕ್ಲಿನಿಕ್ ನಲ್ಲಿ ಚಿಕೆತ್ಸೆ ಪಡೆದಿದ್ದರು. ಬಳಿಕ ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದರು. ಇವರಿಗೆ ಮೆಗ್ಗಾನ್ ಕೋವಿಡ್-19 ಆಸ್ಪತ್ರೆಯ ಐ.ಸಿ.ಯು. ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇತ್ತೀಚೆಗಷ್ಟೇ ತಮ್ಮ ಮಗನಿಗೆ  ಹೆಣ್ಣು ನೋಡಲು ಹರಪ್ಪನಹಳ್ಳಿ ಗೆ ಹೋಗಿದ್ದರು ಎನ್ನಲಾಗಿದೆ. ಅವರ ಮಗ ಕಂಪ್ಯೂಟರ್ ಸೆಂಟರ್ ನಡೆಸುತ್ತಿದ್ದು, ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದು, ತಾಯಿಯ ಅಂತ್ಯಸಂಸ್ಕಾರಕ್ಕೂ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.

 

- Advertisment -

Most Popular

Recent Comments