Home ದೇಶ-ವಿದೇಶ ಭಾರತದಲ್ಲಿ ಕೊರೋನಾಕ್ಕೆ ತುತ್ತಾದವರ ಸಂಖ್ಯೆ 2,26,770 ಕ್ಕೆ ಏರಿಕೆ : ಒಂದೇ ದಿನದಲ್ಲಿ 9,800 ಕ್ಕೂ...

ಭಾರತದಲ್ಲಿ ಕೊರೋನಾಕ್ಕೆ ತುತ್ತಾದವರ ಸಂಖ್ಯೆ 2,26,770 ಕ್ಕೆ ಏರಿಕೆ : ಒಂದೇ ದಿನದಲ್ಲಿ 9,800 ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಗರಿಷ್ಟ ಮಟ್ಟದಲ್ಲಿ ಏರಿಕೆಯಾಗಿದೆ. ಇಂದು ಮತ್ತೆ 9,800 ಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,26,770 ಕ್ಕೆ ಏರಿದೆ. ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆಯೂ 273 ರಷ್ಟು ಏರಿಕೆಯಾಗಿದ್ದು, ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 6,300 ಕ್ಕೇರಿದೆ. ಇವೆಲ್ಲದರ ಮಧ್ಯೆ  1,09,770 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಹಾರಾಷ್ಟ್ರವೊಂದರಲ್ಲೇ ಕಳೆದ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, 2,900 ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 77,793 ಕ್ಕೆ ಏರಿಕೆಯಾಗಿದೆ. ಅದರಲ್ಲಿ 123 ಮಂದಿ ಸಾವನ್ನಪ್ಪುದವರೊಂದಿಗೆ ಸಾವಿನ ಸಂಖ್ಯೆ 2,710 ಕ್ಕೆ ಏರಿಕೆಯಾಗಿದೆ. 33 ಸಾವಿರದ 600ಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ದೇಶದ ಸೋಂಕಿತರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 27 ಸಾವಿರಕ್ಕೆ ಏರಿಕೆಯಾಗಿದೆ. 12 ಜನ ಮೃತಪಟ್ಟು ಸಾವಿನ ಸಂಖ್ಯೆ 220 ರಷ್ಟು ಹೆಚ್ಚಾಗಿದೆ. ಇನ್ನು ಗುಣಮುಖರಾದವರ ಸಂಖ್ಯೆಯೂ 15 ಸಾವಿರದ ಅಂಚಿನಲ್ಲಿದೆ. ಮೂರನೇ ಸ್ಥಾನದಲ್ಲಿರುವ ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಪತ್ತೆಯಾದ ಸೋಂಕಿತರ ಸಂಖ್ಯೆ 25 ಸಾವಿರಕ್ಕೇರಿದೆ. ಇನ್ನು ಈವರೆಗೆ 650 ಜನ ಸೋಂಕಿತರು ಸಾವನ್ನಪ್ಪಿದ್ದು, 9,800ಕ್ಕೂ ಹೆಚ್ಚು ಅಧಿಕ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments