ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ 909 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,356 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದೆ. ಹಾಗೆಯೇ ಸಾವಿನ ಸಂಖ್ಯೆಯು ಏರಿಕೆಯಾಗಿದೆ. ಕೇವಲ 24 ಗಂಟೆಯಲ್ಲಿ 34 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 273 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 8,356 ಸೋಂಕಿತರಲ್ಲಿ ಒಟ್ಟು 716 ಸೋಂಕಿತರು ಗುಣಮುಖರಾಗಿದ್ದು, 7,367 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.