Home ದೇಶ-ವಿದೇಶ ದೇಶದಲ್ಲಿ 35 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ : ಒಂದೇ ದಿನ 1,993 ಜನರಲ್ಲಿ ಸೋಂಕು...

ದೇಶದಲ್ಲಿ 35 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ : ಒಂದೇ ದಿನ 1,993 ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, 1,993 ರಷ್ಟು ಸೋಂಕಿತರು ಹೆಚ್ಚಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 35,043ಕ್ಕೆ ಏರಿಕೆಯಾಗಿದೆ. ನಿನ್ನೆಯಿಂದ ಇವತ್ತಿನವರೆಗೆ 73 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ 1,147 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ನಡುವೆ ಸೋಂಕಿನಿಂದ 8,889 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಹೊಸದಾಗಿ 583 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟು 10,498 ಜನರಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಇಂದಿಗೆ 27 ಮಂದಿ ಸಾವನ್ನಪ್ಪಿದ್ದು, ಒಟ್ಟು 459 ಜನ ಸಾವನ್ನಪ್ಪಿದ್ದಾರೆ. ಈ ಮಧ್ಯೆ  1,773 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ  ಗುಜರಾತ್​ನಲ್ಲಿ 313 ಜನರಲ್ಲಿ ಸೋಂಕು ಪತ್ತೆಯಾಗಿದ್ದು,  ಸೋಂಕಿತರ ಸಂಖ್ಯೆ 4,395 ಕ್ಕೆ ಏರಿದೆ. ಈವರೆಗೆ 613 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 214 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 3,500 ರ ಗಡಿ ದಾಟಿದ್ದು, ನಿನ್ನೆಯಿಂದ ಇಂದಿಗೆ 76 ರಷ್ಟು ಹೆಚ್ಚಾಗಿದೆ. ಈ ಮೂಲಕ ಸೋಂಕಿತರ  ಪಟ್ಟಿಯಲ್ಲಿ ದೆಹಲಿ ಮೂರನೇ ಸ್ಥಾನದಲ್ಲಿದೆ. ಇನ್ನು 54ರಷ್ಟು ಸ್ಥಿರವಾಗಿದ್ದ ಸಾವಿನ ಸಂಖ್ಯೆಯಲ್ಲಿ ಇದೀಗ ಏರಿಕೆಯಾಗಿದ್ದು, ಐವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ  59 ಕ್ಕೆ ಏರಿಕೆಯಾಗಿದೆ. ಇವೆಲ್ಲದರ ನಡುವೆ  ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಸಾವಿರದಷ್ಟು ಮಂದಿ ಗುಣಮುಖರಾಗಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments