ದೇಶದಲ್ಲಿ ಕೇವಲ 24 ಗಂಟೆಯಲ್ಲಿ 3,390 ಜನರಲ್ಲಿ ಸೋಂಕು ದೃಢ : ಸೋಂಕಿತರ ಸಂಖ್ಯೆ 56 ಸಾವಿರಕ್ಕೆ ಏರಿಕೆ

0
313

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, 3,390 ರಷ್ಟು ಸೋಂಕಿತರು ಹೆಚ್ಚಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 56,342 ಕ್ಕೆ ಏರಿಕೆಯಾಗಿದೆ. ನಿನ್ನೆಯಿಂದ ಇವತ್ತಿನವರೆಗೆ 103 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ 1,886 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ನಡುವೆ ಸೋಂಕಿನಿಂದ 16,540 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಹೊಸದಾಗಿ 1,216 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟು 17,974 ಜನರಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಇಂದಿಗೆ 43 ಮಂದಿ ಸಾವನ್ನಪ್ಪಿದ್ದು, ಒಟ್ಟು 694 ಜನ ಸಾವನ್ನಪ್ಪಿದ್ದಾರೆ. ಈ ಮಧ್ಯೆ  3,301 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ  ಗುಜರಾತ್​ನಲ್ಲಿ 387 ಜನರಲ್ಲಿ ಸೋಂಕು ಪತ್ತೆಯಾಗಿದ್ದು,  ಸೋಂಕಿತರ ಸಂಖ್ಯೆ 7,012 ಕ್ಕೆ ಏರಿದೆ. ಈವರೆಗೆ 1,709 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 425 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 5,900 ರ ಗಡಿ ದಾಟಿದ್ದು, ನಿನ್ನೆಯಿಂದ ಇಂದಿಗೆ 448 ರಷ್ಟು ಹೆಚ್ಚಾಗಿದೆ. ಈ ಮೂಲಕ ಸೋಂಕಿತರ  ಪಟ್ಟಿಯಲ್ಲಿ ದೆಹಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಒಟ್ಟು ಸೋಂಕಿತರು 66 ಸಾವನ್ನಪ್ಪಿದ್ದಾರೆ. ಇವೆಲ್ಲದರ ನಡುವೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, 1,931 ಮಂದಿ ಗುಣಮುಖರಾಗಿದ್ದಾರೆ. 

LEAVE A REPLY

Please enter your comment!
Please enter your name here