ಮಂಗಳೂರು: ಮಹಾಮಾರಿ ಕೊರೋನಾಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 44 ಕ್ಕೇರಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಿವಾಸಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಕಾಣಿಸಿಕೊಂಡಿದ್ದು, ಅವರನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗಿತ್ತು. ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.