ನವದೆಹಲಿ: ಭಾರತದಲ್ಲಿ ಸೋಂಕಿತರ ಸಂಖ್ಯೆ ತುಂಬಾ ವೇಗವಾಗಿ ಏರಿಕೆಯಾಗುತ್ತಿದ್ದು, ದೇಶದಲ್ಲಿ ಇಂದು ಮತ್ತೆ ಸೋಂಕಿತರ ಸಂಖ್ಯೆ 8,909 ರಷ್ಟು ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2 ಲಕ್ಷದ 7 ಸಾವಿರದ ಗಡಿ ದಾಟಿದೆ. ಅದರಲ್ಲಿ ಸಾವನ್ನಪ್ಪಿದವರ ಸಂಖ್ಯೆ 5,815 ಕ್ಕೆ ಏರಿಕೆಯಾಗಿದೆ. ಇನ್ನು ಇವೆಲ್ಲದರ ನಡುವೆ 2 ಲಕ್ಷ ಸೋಂಕಿತರಲ್ಲಿ 1 ಲಕ್ಷದಷ್ಟು ಸೋಂಕಿತರು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರಲ್ಲಿ ಮಹಾರಾಷ್ಟ್ರದಲ್ಲಿ 2,287 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 72,300 ಕ್ಕೆ ಏರಿಕೆಯಾಗಿದೆ.ಇನ್ನು ಇಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 103 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಹಾಗಾಗಿ ಮಹಾರಾಷ್ಟ್ರವೊಂದರಲ್ಲೇ 2,400 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 24,586 ಜನ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಒಟ್ಟು 197 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನು ದೆಹಲಿಯಲ್ಲಿ ಈವರೆಗೆ 22,132 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಯಲ್ಲಿ1,298 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ಸಾವನ್ನಪ್ಪಿದವರ ಸಂಖ್ಯೆ 556 ಕ್ಕೆ ಏರಿಕೆಯಾಗಿದೆ.