Home ರಾಜ್ಯ ಇಂದು ಒಂದೇ ದಿನ 257 ಜನರಿಗೆ ಕೊರೋನಾ ಸೋಂಕು !

ಇಂದು ಒಂದೇ ದಿನ 257 ಜನರಿಗೆ ಕೊರೋನಾ ಸೋಂಕು !

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 257 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 4320 ಕೋವಿಡ್ ಪ್ರಕರಣಗಳು ವರದಿಯಾಗಿದೆ.ಇಂದು ಒಂದೇ ದಿನ ಉಡುಪಿ ಜಿಲ್ಲೆಯೊಂದರಲ್ಲೇ 92 ಪ್ರಕರಣಗಳು ವರದಿಯಾಗಿದ್ದರೆ ರಾಯಚೂರಿನಲ್ಲಿ 88 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 2651 ಸಕ್ರಿಯ ಕೋವಿಡ್ ಸೋಂಕಿನ ಪ್ರಕರಣಗಳು ಇವೆ. ಹಾಗೂ ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 4 ಜನರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ ಮತ್ತು ಈ ಮೂಲಕ ನಮ್ಮಲ್ಲಿ ಇಲ್ಲಿಯವರೆಗೆ ಕೋವಿಡ್ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 57ಕ್ಕೇರಿದಂತಾಗಿದೆ.ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 13 ಜನ ಕೋವಿಡ್ ಸೋಂಕಿತರು ತೀವ್ರ ನಿಗಾ ‍ಘಟಕಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಜಿಲ್ಲಾವಾರು ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಉಡುಪಿ (564) ಪ್ರಥಮ ಸ್ಥಾನದಲ್ಲಿದ್ದರೆ, ಕಲಬುರಗಿ (510) ದ್ವಿತೀಯ ಸ್ಥಾನದಲ್ಲಿದೆ. ಇನ್ನು ಒಟ್ಟು 424 ಪ್ರಕರಣಗಳೊಂದಿಗೆ ಬೆಂಗಳೂರು ನಗರ ತೃತೀಯ ಸ್ಥಾನದಲ್ಲಿದೆ. ಬಳಿಕದ ಏಳು ಸ್ಥಾನಗಳಲ್ಲಿ ರಾಯಚೂರು (356), ಮಂಡ್ಯ (317), ಯಾದಗಿರಿ (299), ಬೆಳಗಾವಿ (222), ಹಾಸನ (197), ದಾವಣಗೆರೆ (179) ಹಾಗೂ ಬೀದರ್ (175) ಜಿಲ್ಲೆಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 4 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಇದೀಗ ಜಿಲ್ಲೆಯಲ್ಲಿ ಒಟ್ಟು 135 ಸಕ್ರಿಯ ಕೋವಿಡ್ ಪ್ರಕರಣಗಳು ಇವೆ.

 

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments