Home ರಾಜ್ಯ ಮಂಡ್ಯ ಮಾರುಕಟ್ಟೆಯಲ್ಲಿ ಜನಜಂಗುಳಿ..!

ಮಂಡ್ಯ ಮಾರುಕಟ್ಟೆಯಲ್ಲಿ ಜನಜಂಗುಳಿ..!

ಮಂಡ್ಯ: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ಮಂಡ್ಯ ನಗರದ ಮಾರುಕಟ್ಟೆ ಆವರಣದಲ್ಲಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಕೊವಿಡ್ ನಿಯಮ ಗಾಳಿಗೆ ತೂರಿದ್ದಾರೆ.

ಸಕ್ಕರೆನಾಡಿನ ಮಾರುಕಟ್ಟೆ ಆವರಣದಲ್ಲಿ ವರ್ತಕರು ಮತ್ತು ರೈತರು ಕೊವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದಾರೆ. ಸಾರ್ವಜನಿಕರು ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೆ ವ್ಯವಹಾರ ನಡೆಸುತ್ತಿದ್ದಾರೆ‌.

ಕೊವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಸಹ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಸರ್ಕಾರದ ಆದೇಶವನ್ನು ಅನುಷ್ಟಾನಕ್ಕೆ ತರಬೇಕಾದ ಆರೋಗ್ಯ ಇಲಾಖೆ ಹಾಗೂ ನಗರಸಭೆ ತಲೆ‌ಕೆಡಿಸಿಕೊಂಡಿಲ್ಲ.

ಜಿಲ್ಲೆಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟಿದೆ. ಜಾತ್ರೆ, ಉತ್ಸವ ಸೇರಿದಂತೆ ಇತರೆಡೆ ಜನಜಂಗುಳಿ ಸೇರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಈ ಯಾವುದೇ ನಿಯಮಗಳು ಪಾಲನೆ ಆಗಲಿಲ್ಲ. ವ್ಯಾಪಾರಿಗಳು, ಗ್ರಾಹಕರು ಮಾಸ್ಕ್‌ ಧರಿಸದೇ ಓಡಾಡುತ್ತಿದ್ದರು.

ಕೊವಿಡ್ ಆರಂಭದಲ್ಲಿ ಕಠಿಣ ನಿಯಮ ಕೈಗೊಳ್ಳಲಾಗಿತ್ತು. ಈಗ ಎರಡನೇ ಅಲೆ ಪ್ರಾರಂಭವಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸ್ಥಳದಲ್ಲಿದ್ದ ಪೊಲೀಸರು ಸಹ ಮಾಸ್ಕ್‌ ಧರಿಸದವರಿಗೆ ಹಾಗೂ ಅಂತರ ಪಾಲನೆ ಮಾಡದವರನ್ನು ಕಂಡರು ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ಕಣ್ಮುಚ್ಚಿ ಕುಳಿತ್ತಿದ್ದಾರೆ.

ವಾಹನ ದಟ್ಟಣೆ:ಅಗತ್ಯ ವಸ್ತು ಖರೀದಿ ವೇಳೆಯಲ್ಲಿ ಹೆಚ್ಚಿನ ವಾಹನ ದಟ್ಟಣೆ ಸೃಷ್ಟಿಯಾಯಿತು. ಬೆಳಿಗ್ಗೆಯಿಂದಲೇ ವಾಹನ ಸಂಚಾರ ಹೆಚ್ಚಾಗಿತ್ತು. ಕೆಲ ಕಾಲ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಬೈಕ್, ಕಾರ್‌ಗಳಲ್ಲಿ ಜನರು ಬಂದು ಸಾಮಾಗ್ರಿ ಖರೀದಿಸಿ, ಹಿಂತಿರುಗಿದರು.

 – ಡಿ.ಶಶಿಕುಮಾರ್, ಮಂಡ್ಯ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments