Home ರಾಜ್ಯ ‘ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಕರ್ಫ್ಯೂ ಜಾರಿ’

‘ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಕರ್ಫ್ಯೂ ಜಾರಿ’

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಕೊರೋನಾ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಲಾಕ್ ಡೌನ್ ಅಸ್ತ್ರವನ್ನು ಬಳಿಸಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅನುಮತಿಯನ್ನು ನೀಡಲಾಗಿದೆ.

ಹಾಲು, ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳು ಓಪನ್ ಇರುತ್ತವೆ. ಹೊಟೆಲ್ ಗಳಲ್ಲಿ ಬೆಳಿಗ್ಗೆ 10 ಗಂಟೆವರೆಗೆ ಪಾರ್ಸೆಲ್ ಗೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಹೋಂ ಡೆಲಿವರಿಗೆ ಸಂಪೂರ್ಣ ಅವಕಾಶವನ್ನು ಕೊಡಲಾಗಿದೆ. ಸಾರಿಗೆ ಸಂಚಾರ, ಮೆಟ್ರೋ, ಕ್ಯಾಬ್ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ವಾಹನಗಳ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. ಮದುವೆ ಕಾರ್ಯಕ್ರಮಕ್ಕೆ 50 ಜನರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ. ತುರ್ತು ಸೇವೆ ಒದಗಿಸೋ ಸಿಬ್ಬಂದಿಗೆ ಐಡಿ ಕಾರ್ಡ್ ಕಡ್ಡಾಯ.ವೈದ್ಯಕೀಯ ಉಪಕರಣ ತಯಾರಿಕಾ ಕೈಗಾರಿಕೆಗಳು, ಆಕ್ಸಿಜನ್ ಸಂಬಂಧಿಸಿದ ಎಲ್ಲಾ ಕೈಗಾರಿಕೆಗಳು ಓಪನ್ ಗೆ ಅನುಮತಿಯನ್ನು ನೀಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments