Sunday, June 26, 2022
Powertv Logo
Homeರಾಜ್ಯಅಂಫಾನ್ ಚಂಡಮಾರುತ ಅಬ್ಬರ : ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ 

ಅಂಫಾನ್ ಚಂಡಮಾರುತ ಅಬ್ಬರ : ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ 

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಂಫಾನ್ ಚಂಡಮಾರುತ ಉಂಟಾಗಿದ್ದು, ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಂಡಮಾರುತ ಉಂಟಾಗಿದ್ದ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಚಂಡಮಾರುತದ ಪ್ರಭಾವ ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಿಗೆ ತಟ್ಟಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು ಹಾಸನ ಸೇರಿದಂತೆ ಹಲವೆಡೆ 65 ರಿಂದ 115 ಮೀ.ಮೀ ನಷ್ಟು ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಂಆನ ಇಲಾಖೆ ತಿಳಿಸಿದೆ.

 

  

 

- Advertisment -

Most Popular

Recent Comments