ಬೆಂಗಳೂರು : ಡಿ. ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಿ. ಕೆ ಶಿವಕುಮಾರ್ ತಾಯಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಹಾಗೆಯೇ ಕಾರ್ಯಕ್ರಮದ ಪ್ರಾರಂಭದಲ್ಲಿ ದಿನೇಶ್ ಗುಂಡುರಾವ್ ತಮ್ಮ ಅಧಿಕಾರವನ್ನು ಡಿ. ಕೆ ಶಿವಕುಮಾರ್ ಗೆ ಹಸ್ತಾಂತರ ಮಾಡಿ ಮುಂದಿನ ದಿನಗಳಲ್ಲಿ ಎಲ್ಲರೂ ಕೂಡಿ ಒಟ್ಟಿಗೆ ಕೆಲಸ ಮಾಡೋಣ. ಕಾಂಗ್ರೆಸ್ ಪಕ್ಷ ಮತ್ತಷ್ಟು ಬೆಳೆಸೋಣ ಎಂದು ತಮ್ಮ ಭಾಷಣದಲ್ಲಿ ಹೇಳಿದರು.