Home ರಾಜ್ಯ ದ.ಕ ಜಿಲ್ಲೆಯಲ್ಲಿ ಕೊರೊನಾ ಒಂದೇ ದಿನ ಮೂವರು ಬಲಿ; ಸಾವಿನ ಸಂಖ್ಯೆ 22ಕ್ಕೆ ಏರಿಕೆ

ದ.ಕ ಜಿಲ್ಲೆಯಲ್ಲಿ ಕೊರೊನಾ ಒಂದೇ ದಿನ ಮೂವರು ಬಲಿ; ಸಾವಿನ ಸಂಖ್ಯೆ 22ಕ್ಕೆ ಏರಿಕೆ

ದ.ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೆರೆಮೂಲೆ ಮಹಿಳೆ, ನಗರದ ಕೋಡಿಕಲ್ ನ ಮಹಿಳೆ ಮತ್ತು ಕೂಳೂರಿನ ಪುರುಷರೊಬ್ಬರು ಮೃತಪಟ್ಟಿದ್ದಾರೆ. ಸುಳ್ಯದ ಮಹಿಳೆ ವಾರದ ಹಿಂದೆ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಎರಡು ದಿನಗಳ ಹಿಂದೆ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು.ಅವರ ಗಂಟಲು ದ್ರವ ಪರೀಕ್ಷೆ ವರದಿ ಬರುವ ಮುಂಚೆ ಸಾವನ್ನಪ್ಪಿದ್ದು ಬಳಿಕ ಇವರಿಗೆ ಕೊರೊನಾ ದೃಢಪಟ್ಟಿದೆ. ಕೂಳೂರು ಮತ್ತು ಕೋಡಿಕಲ್ ನ ವ್ಯಕ್ತಿಗಳಿಬ್ಬರು ಕೊರೊನಾದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

‘ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವು’

ಹಾಸನ : ಕಾಡಾನೆ ತುಳಿದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅರಕಲಗೂಡು ತಾಲೂಕಿನ ಹಾಸನ-ಕೊಡಗು ಗಡಿ ಭಾಗದ ಬಾಣಾವರ ಗೇಟ್ ನ ಬೆಟ್ಟಗಳಲೆ ಬಳಿ ತಡರಾತ್ರಿ ನಡೆದಿದೆ. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ...

‘ಇಂದು ವಿಧಾನಮಂಡಲ ಕಲಾಪ ಆರಂಭ’

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಕಲಾಪ ಆರಂಭವಾಗಲಿದ್ದು, ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ, ಇತ್ತೀಚಿನ ಖಾತೆ ಹಂಚಿಕೆ ಗೊಂದಲ, ವಿಧಾನಪರಿಷತ್ ನ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಸೇರಿದಂತೆ...

‘ಶಾಸಕ ಎಂ.ಸಿ. ಮನಗೂಳಿ ವಿಧಿವಶ’

ವಿಜಯಪುರ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ (85) ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ತಡರಾತ್ರಿ 1 ಗಂಟೆಗೆ ನಿಧನರಾಗಿದ್ದಾರೆ. ಸಿಂಧಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್...

Recent Comments