Home P.Special ರಕ್ಷಾಬಂಧನದಂದು ಸೋದರಿಯ ಮನವಿ ಮೇರೆಗೆ ಶರಣಾದ ನಕ್ಸಲ್​..!

ರಕ್ಷಾಬಂಧನದಂದು ಸೋದರಿಯ ಮನವಿ ಮೇರೆಗೆ ಶರಣಾದ ನಕ್ಸಲ್​..!

ದಾಂತೇವಾಡ :  ಆತ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿ. ಯಾರು ಏನೇ ಹೇಳಿದರೂ ಆತ ಬದಲಾಗಿರಲಿಲ್ಲ. ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದರು. ಆತನ ಸುಳಿವು ಕೊಟ್ಟವರಿಗೆ ಬರೋಬ್ಬರಿ 8 ಲಕ್ಷ  ರೂ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಅಷ್ಟಾದರೂ ತಲೆಮರೆಸಿಕೊಂಡಿದ್ದ ಆ ವ್ಯಕ್ತಿ ಅವನಾಗಿಯೇ ಪೊಲೀಸರ ಮುಂದೆ ಬಂದಿದ್ದಾನೆ… ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ…ಅದಕ್ಕೆ ಕಾರಣ ಸೋದರಿ ಮಾಡಿದ ಒಂದೇ ಒಂದು ಮನವಿ…!

ಹೌದು, ಸೋದರತ್ವದ ಸಂಕೇತವಾದ ರಕ್ಷಾಬಂಧನದ ದಿನವಾದ ಇಂದು ಆ ನಕ್ಸಲ್ ತಂಗಿಯ ಮನವಿಗೆ ಸ್ಪಂದಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಆತ ಛತ್ತೀಸ್​​ ಗಢದ ದಾಂತೇವಾಡದ ಮಲ್ಲ. ನಕ್ಸಲ್ ಡೆಪ್ಯುಟಿ ಕಮಾಂಡರ್ ಆಗಿದ್ದನು. ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಅವನ ಸುಳಿವು ಕೊಟ್ಟವರಿಗೆ 8 ಲಕ್ಷ ರೂ ಬಹುಮಾನ ನೀಡುವುದಾಗಿ ಅಲ್ಲಿನ ಪೊಲೀಸ್ ಇಲಾಖೆ ಘೋಷಿಸಿತ್ತು. ಇದೀಗ ಆತ ರಕ್ಷಾಬಂಧನದಂದು ತಂಗಿಯ ಮನವಿ ಮೇರೆಗೆ ಪೊಲೀಸರಿಗೆ  ಶರಣಾಗಿದ್ದಾನೆ.  ಪೊಲೀಸರಿಗೆ ಶರಣಾಗುವ ಮೊದಲು ಸೋದರಿ ಆತನಿಗೆ ರಾಖಿ ಕಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ, ಮಲ್ಲ ನಕ್ಸಲ್ ಡೆಪ್ಯುಟಿ ಕಮಾಂಡ್ ಆಗಿದ್ದ. ಪೊಲೀಸರು ಜೀವ ಕಳೆದುಕೊಳ್ಳುವಂತಹ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments