Tuesday, September 27, 2022
Powertv Logo
Homeಸಿನಿಮಾಜವಬ್ದಾರಿಯುತವಾಗಿ ನಡೆದುಕೊಳ್ಳಿ : ನಟ ದರ್ಶನ್ ಮನವಿ

ಜವಬ್ದಾರಿಯುತವಾಗಿ ನಡೆದುಕೊಳ್ಳಿ : ನಟ ದರ್ಶನ್ ಮನವಿ

ಬೆಂಗಳೂರು : ಕೊರೋನಾ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಇಡೀ ಕರ್ನಾಟಕವನ್ನು ಲಾಕ್​ಡೌನ್ ಮಾಡಲಾಗಿದೆ. ಮಾರ್ಚ್ 31ರವರೆಗೆ ಇಡೀ ರಾಜ್ಯ ಬಂದ್ ಆಗಲಿದೆ. ಆದರೂ ಕೆಲವರೂ ಬೇಜಬ್ದಾರಿತನದ ವರ್ತನೆ ತೋರುತ್ತಿದ್ದಾರೆ. ಮನೆಬಿಟ್ಟು ಹೊರಬರಬೇಡಿ ಎಂದರೂ ಮೊಂಡುತನ ಪ್ರದರ್ಶಿಸುತ್ತಿದ್ದಾರೆ. ಈ ನಡುವೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಳಕಳಿಯಿಂದ ಸಂದೇಶ ರವಾನಿಸಿದ್ದಾರೆ.
”ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ಸಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ. ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ, ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.’Common sense is not common’ ಎನ್ನುವ ಹಾಗೆ ಮಾಡಬೇಡಿ”. ಎಂದು ಫೇಸ್​ಬುಕ್, ಟ್ಟಿಟರ್ ಮೂಲಕ ತಿಳಿಹೇಳಿದ್ದಾರೆ.

21 COMMENTS

  1. doxycycline gram negative [url=https://doxycyclineus.com/#]doxycycline 100 mg [/url] doxycycline 200 mg for dogs how long before side effects from doxycycline mono leaves

LEAVE A REPLY

Please enter your comment!
Please enter your name here

- Advertisment -

Most Popular

Recent Comments