Home ರಾಜ್ಯ ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡೋ ಮೂಲಕ ಜನ್ಮದಿನ ಆಚರಣೆ..!

ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡೋ ಮೂಲಕ ಜನ್ಮದಿನ ಆಚರಣೆ..!

ದಾವಣಗೆರೆ : ಕೊರೋನಾ ಸಂದರ್ಭದಲ್ಲಿ ಸಾಮಾಜಿಕ ಅಂತರ ಮರೆತು ರಾಜಕೀಯ ನಾಯಕರು ಜನ್ಮದಿನ ಆಚರಿಸಿಕೊಂಡು ಸುದ್ದಿಯಾಗೋದು ಕೇಳಿದ್ದೇವೆ. ಆದರೆ ದಾವಣಗೆರೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು, ತಮ್ಮ ಜನ್ಮದಿನದಂದು ಪೌರ ಕಾರ್ಮಿಕರ ಪಾದ ಪೂಜೆ ಮಾಡಿ, ಬಳಿಕ ಕೊರೋನಾ ವಾರಿಯರ್ಸ್ ಗೆ ಸನ್ಮಾನಿಸಿ ಧೈರ್ಯ ತುಂಬುವ ಮೂಲಕ ಮಾದರಿಯಾಗಿದ್ದಾರೆ.

ದಾವಣಗೆರೆಯ ವಿದ್ಯಾನಗರದ ‌ ಪ್ರದೇಶದಲ್ಲಿ ನಿತ್ಯ ಬೀದಿ ಸ್ವಚ್ಚ ಮಾಡುವ ಪೌರಕಾರ್ಮಿಕ ಮಹಿಳೆಯರನ್ನು ವಿದ್ಯಾನಗರದಲ್ಲೇ ಇರುವ ಸ್ವಗೃಹಕ್ಕೆ ಆಹ್ವಾನಿಸಿ ಪತ್ನಿ ಲತಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪಾದಪೂಜೆ ಮಾಡಿ ಪೌರಕಾರ್ಮಿಕ ಮಹಿಳೆಯ ಪಾದಕ್ಕೆ ನಮಸ್ಕರಿಸಿದ್ದಾರೆ. ಜೊತೆಗೆ ಕುವೆಂಪು ಕನ್ನಡ ಭವನದಲ್ಲಿ ಕೊರೊನಾ ವಾರಿಯರ್ಸ್ ಗಳಾದ ಪೊಲೀಸ್, ನರ್ಸ್, ವೈದ್ಯರು, ಮಾಧ್ಯಮದವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು.

ಲೋಕಿಕೆರೆ ನಾಗರಾಜ್ ಅವರ ಈ ಕಾರ್ಯಕ್ಕೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಶಾಸಕ ಎಸ್.ಎ ರವೀಂದ್ರನಾಥ್, ಮೇಯರ್ ಅಜಯ್ ಕುಮಾರ್, ಹೋರಾಟಗಾರ ಬಾಡದ ಆನಂದರಾಜ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments