Home ರಾಜ್ಯ ‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌

ಕಳೆದ ನಾಲ್ಕು ದಿನಗಳ ಹಿಂದೆ ಗ್ರಾಮದ ಹೊರವಲಯದಲ್ಲಿ ಆಕ್ಸಿಜನ್ ಸಹಿತ ಕೊವಿಡ್‌ಕೆರ್ ಸೆಂಟರ್ ಮಾಡಲಾಗಿತ್ತು. ಆದರೆ ಕೊವಿಡ್ ಕೆರ್ ಸೆಂಟರ್‌ನಿಂದ ಕೊರೊನಾ ವೈರಸ್ ಹರಡುತ್ತೆಂಬ ಆತಂಕಕ್ಕೆ ಒಳಗಾದ ಗುಂಡೇಪಲ್ಲಿ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಇನ್ನೂ ನಿನ್ನೆ ಸಂಜೆ ವೈದ್ಯರು ಸೊಂಕಿನಿಂದ ಬಳಲುತ್ತಿದ್ದವರಿಗೆ ಚಿಕಿತ್ಸೆ ನೀಡುವಾಗ ಕೊವಿಡ್ ಕೆರ್‌ಗೆ ಬಡಿಗೆ ಕಲ್ಲುಗಳನ್ನ ಹಿಡಿದು 100 ರಿಂದ 150 ಜನ ದಾಳಿ ಮಾಡಿದ್ದಾರೆ. ಕೆರ್ ಸೆಂಟರ್‌ಗೆ ನುಗ್ಗಿ ವೈದ್ಯರಾದ ಪ್ರಭಾಜನ್ ಮತ್ತು ಸುರೇಶ ಬಾಬು ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಇಡೀ ಕೊವಿಡ್ ಕೆರ್ ಸೆಂಟರ್ ಧ್ವಂಸಗೊಳಿಸಿದ್ದಾರೆ. ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಮುಧೋಳ ಠಾಣೆ ಪೊಲೀಸರು, ಹಲವರನ್ನ ಬಂಧಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments