Saturday, May 21, 2022
Powertv Logo
Homeರಾಜ್ಯಸಿಡಿಲು ಬಡಿದು ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಸಿಡಿಲು ಬಡಿದು ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಹಾವೇರಿ : ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಹಾನಗಲ್ ಪಟ್ಟಣದಲ್ಲಿ ಟೈಲ್ಸ್ ಕೆಲಸ‌ ಮಾಡುತ್ತಿದ್ದ ಯುವಕರು, ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ಹಸನಾಬಾದಿಗೆ ತೆರಳುತ್ತಿದ್ದ ವೇಳೆ ಸಿಡಿಲು ಗುಡುಗಿನೊಂದಿಗೆ ಮಳೆ ಬರುತ್ತಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ವೀರೇಶ ಹೊಸಮನಿ 25 ವರ್ಷ ಮೃತರಾಗಿದ್ದು, ಶಶಾಂಕ 20 ವರ್ಷ ಮತ್ತು ದೇವರಾಜ 20 ವರ್ಷ ಗಾಯಗೊಂಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದ ಶಾಸಕ ಶ್ರೀನಿವಾಸ ಮಾನೆ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisment -

Most Popular

Recent Comments