ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಗರಿಷ್ಟ ಮಟ್ಟದಲ್ಲಿ ಏರಿಕೆಯಾಗಿದೆ. ಮೊದಲ ಬಾರಿಗೆ 9 ಸಾವಿರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,16,919 ಕ್ಕೆ ಏರಿದೆ. ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆಯೂ 260 ರಷ್ಟು ಏರಿಕೆಯಾಗಿದ್ದು, ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 6 ಸಾವಿರದ ಗಡಿದಾಟಿದೆ.ಇವೆಲ್ಲದರ ಮಧ್ಯೆ 1,04,107 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಹಾರಾಷ್ಟ್ರವೊಂದರಲ್ಲೇ ಕಳೆದ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, 2500ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 74,860 ಕ್ಕೆ ಏರಿಕೆಯಾಗಿದೆ. ಅದರಲ್ಲಿ 122 ಮಂದಿ ಸಾವನ್ನಪ್ಪುದವರೊಂದಿಗೆ ಸಾವಿನ ಸಂಖ್ಯೆ 2,587 ಕ್ಕೆ ಏರಿಕೆಯಾಗಿದೆ. 32 ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ದೇಶದ ಸೋಂಕಿತರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 25,872ಕ್ಕೆ ಏರಿಕೆಯಾಗಿದೆ. 11 ಜನ ಮೃತಪಟ್ಟು ಸಾವಿನ ಸಂಖ್ಯೆ 208 ರಷ್ಟು ಹೆಚ್ಚಾಗಿದೆ. 14 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಒಂದೂವರೆ ಸಾವಿರದಷ್ಟು ಸೋಂಕಿತರು ಪತ್ತೆಯಾಗಿದ್ದು, ಈವರೆಗೆ ಪತ್ತೆಯಾದ ಸೋಂಕಿತರ ಸಂಖ್ಯೆ 23,645 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ 606 ಜನ ಸೋಂಕಿತರು ಸಾವನ್ನಪ್ಪಿದ್ದು, 9,500 ಕ್ಕೂ ಅಧಿಕ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.