Saturday, October 1, 2022
Powertv Logo
Homeಈ ಕ್ಷಣಬಾವಿಗೆ ಬಿದ್ದು 13 ಮಂದಿ ಸಾವು

ಬಾವಿಗೆ ಬಿದ್ದು 13 ಮಂದಿ ಸಾವು

ಮದುವೆ ಕಾರ್ಯಕ್ರಮದ ಸಂದರ್ಭದಲ್ಲಿ ಬಾವಿಗೆ ಬಿದ್ದು ಸುಮಾರು 13 ಮಂದಿ ಮಹಿಳೆಯರು, ಹುಡುಗಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಈ ಸಮಾರಂಭಕ್ಕೆ ಒಂದು ದಿನ ಮೊದಲೇ ಕುಟುಂಬಸ್ಥರು ಮತ್ತು ಸಂಬಂಧಿಗಳು ಆಗಮಿಸಿದ್ದರು. ವಧು-ವರನಿಗೆ ಅರಿಶಿನ ಹಚ್ಚುವ ಕಾರ್ಯ ನಡೆಯುತ್ತಿತ್ತು. ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ಮಹಿಳೆಯರು ಮತ್ತು ಹುಡುಗಿಯರು ಸೇರಿದಂತೆ ನೂರಾರು ಜನ ಬಾವಿಗೆ ಪೂಜೆ ಸಲ್ಲಿಸಲು ತೆರಳಿದ್ದಾರೆ. ಬಾವಿಯಲ್ಲಿ ನೀರು ತುಂಬಿತ್ತು. ಜನಸಂದಣಿ ಹೆಚ್ಚಾಗಿತ್ತು. ಹುಡುಗಿಯರು ಮತ್ತು ಮಹಿಳೆಯರು, ಮಕ್ಕಳು ಬಾವಿಯ ದಂಡೆಯ ಮೇಲೆ ಕುಳಿತುಕೊಂಡು ಪೂಜೆಯ ವಿಧಾನವನ್ನು ವೀಕ್ಷಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಾವಿ ಪೂಜೆ ನೆರವೇರಿಸುತ್ತಿದ್ದಾಗ ದುರ್ಘಟನೆ ನಡೆಯಿತು.

ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಆಸ್ಪತ್ರೆಗೆ ದಾಖಲಾದವರ ಪೈಕಿ ಕೆಲವು ಗಾಯಾಳುಗಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಪ್ರಧಾನಿ ಮೋದಿ, ಸಿಎಂ ಯೋಗಿ ಸಂತಾಪ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಸ್ಥಳೀಯ ಆಡಳಿತ ಎಲ್ಲ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

- Advertisment -

Most Popular

Recent Comments