Home ದೇಶ-ವಿದೇಶ ರೋಡ್​ ಶೋ ವೇಳೆ ಕೇಜ್ರಿವಾಲ್​ಗೆ ಕಪಾಳ ಮೋಕ್ಷ..!

ರೋಡ್​ ಶೋ ವೇಳೆ ಕೇಜ್ರಿವಾಲ್​ಗೆ ಕಪಾಳ ಮೋಕ್ಷ..!

ಲೋಕಸಭಾ ಚುನಾವಣಾ ಪ್ರಚಾರದ ರೋಡ್​ ಶೋನಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳ ಮೋಕ್ಷ ಮಾಡಿದ್ದಾನೆ.
ನವದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಕೇಜ್ರಿವಾಲ್​ ಭಾಗಿಯಾಗಿದ್ದ ವೇಳೆ ಅನಾಮಿಕನೊಬ್ಬ ಬಂದು ದಿಢೀರನೇ ಕಪಾಳಕ್ಕೆ ಹೊಡೆದಿದ್ದಾನೆ. ಆತ ಹಲ್ಲೆ ನಡೆಸುತ್ತಿದ್ದಂತೆ ಗಾಬರಿಯಿಂದ ಕೇಜ್ರಿವಾಲ್ ಹಿಂದೆ ಸರಿದಿದ್ದಾರೆ. ಬಳಿಕ ಕೇಜ್ರಿವಾಲ್ ಬೆಂಬಲಿಗರು ಆ ವ್ಯಕ್ತಿಯನ್ನು ತಡೆದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತ ಯಾಕೆ ಸಿಎಂ ಮೇಲೆ ಕೈ ಮಾಡಿದ ಅನ್ನೋದು ವಿಚಾರಣೆ ಬಳಿಕವಷ್ಟೇ ತಿಳಿಯ ಬೇಕಿದೆ.
ಇನ್ನು ಕೇಜ್ರಿವಾಲ್​ ಇಂಥಾ ಸನ್ನಿವೇಶವನ್ನು ಎದುರಿಸಿದ್ದು ಇದೇ ಮೊದಲಲ್ಲ. 2014ರಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಆಟೋರಿಕ್ಷಾ ಚಾಲಕನೊಬ್ಬ ಕೇಜ್ರಿವಾಲ್ ಅವರಿಗೆ ಕಪಾಳ ಮೋಕ್ಷ ಮಾಡಿದ್ದ. 2016ರಲ್ಲಿ ವಾಯು-ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ರೂಪಿಸಿದ್ದಾಗ, ಆ ಬಗ್ಗೆ ವಿವರ ನೀಡುತ್ತಿದ್ದ ಸಂದರ್ಭದಲ್ಲಿ ಶೂ ಎಸೆದಿದ್ದ.
ಛತ್ರಸಾಲ್​ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ವಂದನಾರ್ಪಣೆ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಶಾಹಿ ಎಸೆದಿದ್ದರು. 2018ರ ನವೆಂಬರ್​ನಲ್ಲಿ ದೆಹಲಿಯಲ್ಲಿ ಅವರ ಕಚೇರಿಯ ಹೊರ ಭಾಗದಲ್ಲೇ ವ್ಯಕ್ತಿಯೊಬ್ಬ ಅವರ ಮೇಲೆ ಖಾರದ ಪುಡಿ ಎರಚಿದ್ದನ್ನೂ ಈ ವೇಳೆ ಸ್ಮರಿಸಬಹುದು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments