Home ರಾಜ್ಯ ‘ಜನರಿಗೆ ಸಮಸ್ಯೆ ಆಗದಂತೆ ಸಾರಿಗೆ ಇಲಾಖೆ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ’

‘ಜನರಿಗೆ ಸಮಸ್ಯೆ ಆಗದಂತೆ ಸಾರಿಗೆ ಇಲಾಖೆ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ’

ಬೆಂಗಳೂರು: ನಾಳೆಯಿಂದ ರಾಜ್ಯಸಾರಿಗೆ ನೌಕರರ ಮುಷ್ಕರ ಹಿನ್ನಲೆಯಲ್ಲಿ ಜನರಿಗೆ ಸಮಸ್ಯೆ ಆಗದಂತೆ ಸಾರಿಗೆ ಇಲಾಖೆ ಮಿನಿ ಬಸ್ , ಮ್ಯಾಕ್ಸಿ ಕ್ಯಾಬ್​, ಖಾಸಗಿ ಬಸ್ ಗಳ ಓಡಾಟಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಸಾರಿಗೆ ಇಲಾಖೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ನೀಡಿದೆ. ಮುಷ್ಕರದಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆಯ ಅಪರ ಆಯುಕ್ತ ನರೇಂದ್ರ ಹೋಳ್ಕರ್ ಹೇಳಿದ್ದಾರೆ.

ಖಾಸಗಿ ವಾಹನಗಳಿಗೆ ತಾತ್ಕಾಲಿಕ ಪರ್ಮಿಟ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪರ್ಮಿಟ್ ಪಡೆದು ಬಸ್ ಓಡಿಸಲು ಮಾಲೀಕರು ಮುಂದೆ ಬಂದಿದ್ದಾರೆ. ಸರ್ಕಾರಿ ಬಸ್ ಸಂಚಾರಿಸುತ್ತಿದ್ದ ಕಡೆಯಲ್ಲಿ ಖಾಸಗಿ ಬಸ್ ಸಂಚರಿಸಲಿವೆ. ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯದಂತೆ ಖಾಸಗಿಯವರಿಗೆ ಸೂಚನೆಯನ್ನು ನೀಡಲಾಗಿದೆ. ಪ್ರಯಾಣಿಕರಿಗೆ ಆರ್ಥಿಕ ಹೊರೆ ಆಗದಂತೆ ದರ ನಿಗದಿ ಮಾಡಲಾಗಿದೆ. ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments