ಶಿವಮೊಗ್ಗ : ತನಗೂ ರಾಜ್ಯಪಾಲನಾಗುವ ಅರ್ಹತೆಯಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಭದ್ರ ನೆಲೆ ಇದ್ದರೂ ರಾಜ್ಯಪಾಲ ಹುದ್ದೆ ಸೇರಿದಂತೆ ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಿಗೆ ಕರ್ನಾಟಕವನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿಲ್ಲ ಬಿಜೆಪಿ ಹಿರಿಯ ಮುಖಂಡ ಡಿ.ಹೆಚ್ ಶಂಕರಮೂರ್ತಿ ವಿಷಾದ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತದ ರಾಜ್ಯದಲ್ಲಿ ಬಿಜೆಪಿಗೆ ಭದ್ರ ನೆಲೆ ಇರುವುದು ಕರ್ನಾಟಕದಲ್ಲಿ ಮಾತ್ರ . ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಲಭಿಸಿದೆ. ಆದರೆ ರಾಮಾಜೋಯಿಸ್ ಬಳಿಕ ಕರ್ನಾಟಕದ ನಾಯಕರು ಯಾರೂ ಕೇಂದ್ರದ ಉನ್ನತ ಹುದ್ದೆ ಅಲಂಕರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಾನು ನನಗೆ ಉನ್ನತ ಹುದ್ದೆ ಬೇಕು ಎಂದು ಕೇಳುವುದಕ್ಕೆ ಸಂಕೋಚವಾಗುತ್ತದೆ. ಆದರೆ, ರಾಜ್ಯದಿಂದ ಯಾರನ್ನಾದರೂ ಪರಿಗಣಿಸಬಹುದಿತ್ತು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.