Home ರಾಜ್ಯ ಗಾಂಜಾ ಚಟ ಹತ್ತಿಸಿ ಬ್ಲ್ಯಾಕ್​ಮೇಲ್ -ವಿದ್ಯಾರ್ಥಿಗಳೇ ಹುಷಾರ್..!

ಗಾಂಜಾ ಚಟ ಹತ್ತಿಸಿ ಬ್ಲ್ಯಾಕ್​ಮೇಲ್ -ವಿದ್ಯಾರ್ಥಿಗಳೇ ಹುಷಾರ್..!

ಧಾರವಾಡ : ವಿದ್ಯಾರ್ಥಿಗಳಿಗೆ ಗಾಂಜಾ ಚಟ ಹತ್ತಿಸಿ ಬ್ಲ್ಯಾಕ್​ ಮೇಲ್​ ಮಾಡುವ ಗ್ಯಾಂಗ್​ವೊಂದು ಧಾರವಾಡದಲ್ಲಿ ನೆಲೆನಿಂತಿದೆ..! ಕಳೆದ ಒಂದು ವರ್ಷದಿಂದಲೂ ವಿದ್ಯಾರ್ಥಿಗಳ ಬಾಳಲ್ಲಿ ಆ ಗ್ಯಾಂಗ್​ ಚೆಲ್ಲಾಟ ಆಡುತ್ತಿದ್ದು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಇದ್ದರೂ ಅದ್ಯಾಕೋ ಮೌನಕ್ಕೆ ಶರಣಾಗಿ ಬಿಟ್ಟಿದ್ದಾರೆ.
ಧಾರವಾಡದ ಲಕ್ಷ್ಮಿ ಸಿಂಗನಕೇರಿಯ ಅಮಿತ್​ ಕೊರವರ ಗ್ಯಾಂಗ್​ ಅದಾಗಿದ್ದು, ಆ ಗ್ಯಾಂಗ್​ಗೆ ಪರ ಜಿಲ್ಲೆಗಳ, ಅದರಲ್ಲೂ ಶ್ರೀಮಂತ ವಿದ್ಯಾರ್ಥಿಗಳೇ ಟಾರ್ಗೆಟ್. ವಿದ್ಯಾರ್ಥಿಗಳಿಗೆ ಗಾಂಜಾ ಚಟ ಹತ್ತಿಸಿ, ಗಾಂಜಾ ನಶೆಯಲ್ಲಿ ತೇಲುವಂತೆ ಮಾಡಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತದೆ ಆ ಗ್ಯಾಂಗ್. ಬಳಿಕ ದುಡ್ಡು ಕೊಡುವಂತೆ ಟಾರ್ಚರ್ ನೀಡಲಾರಂಭಿಸುತ್ತಾರೆ. ದುಡ್ಡು ಕೊಡದೇ ಇದ್ದರೆ ಪೋಷಕರಿಗೆ ತೋರಿಸೋದಾಗಿ ಹೇಳಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ. ಮಾರಣಾಂತಿಕ ಹಲ್ಲೆಯನ್ನೂ ನಡೆಸುತ್ತಾರೆ ಅಂತ ತಿಳಿದುಬಂದಿದೆ. ಈ ಬಗ್ಗೆ ಗೊತ್ತಿದ್ದರೂ ಮೌನವಹಿಸಿರುವ ಧಾರವಾಡ ಪೊಲೀಸರು ಎಚ್ಚೆತ್ತುಕೊಂಡು ವಿದ್ಯಾರ್ಥಿಗಳ ಬಾಳಲ್ಲಿ ಚೆಲ್ಲಾಟವಾಡುತ್ತಿರುವ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಬೇಕಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments