ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳ ಕಾಲ ಸುರಿದ ಧಾರಾಕಾರ ಮಳೆಗೆ ಕಾಫಿ, ಭತ್ತ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಈ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ಪ್ರಮುಖವಾಗಿ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್, ಕೊಟ್ಟಿಗೆಹಾರ, ಅತ್ತಿಗೆರೆ, ಫಲ್ಗುಣಿ, ಬೆಟ್ಟಗೆರೆ, ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ರೈತರೊಂದಿಗೆ ಸಮಾಲೋಚನೆ ನಡೆಸಿದರು. ನಿರಂತರ ಸುರಿದ ಮಳೆಯಿಂದ ಹಾಳಾಗಿ ಹೋದ ಹಾಗೂ ಕಾಫಿ ಹಾಗೂ ಭತ್ತದ ಬೆಳೆಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಬೆಳೆಗಳನ್ನು ರೈತರು ಕೈ ಯಲ್ಲಿ ಹಿಡಿದು ಜಿಲ್ಲಾಧಿಕಾರಿಗಳಿಗೆ ರೈತರು ತೋರಿಸಿ ಪರಿಹಾರ ನೀಡುವಂತೆ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ರೈತರೊಂದಿಗೆ ಜಿಲ್ಲಾಧಿಕಾರಿ ಚರ್ಚೆ ನಡೆಸಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದರು. ಈಗ ಈಗಾಗಲೇ ಕಾಫಿ ಬೋರ್ಡ್ ನಿಂದ 5 ತಂಡಗಳನ್ನು ರಚನೆ ಮಾಡಿ ಸರ್ವೆ ಮಾಡಲು ಸೂಚನೆ ನೀಡಲಾಗಿದ್ದು, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಕೂಡಲೇ ಸರ್ವೆ ಮಾಡಿ ಮಾಹಿತಿ ನೀಡುತ್ತಾರೆ. ಅದರ ಮಾಹಿತಿ ಆಧಾರದ ಮೇಲೆ ಸರ್ಕಾರಕ್ಕೆ ವರದಿ ಸಲ್ಲಿಸಿ ಶೀಘ್ರವಾಗಿ ರೈತರಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ
– ಸಚಿನ್ ಶೆಟ್ಟಿ ಚಿಕ್ಕಮಗಳೂರು