ಬೆಂಗಳೂರು: ರಾಜ್ಯದಲ್ಲಿ ವೈದ್ಯರಿಗೆ ಸೋಂಕು ತಗುಲಿದ ಎರಡನೇ ಪ್ರಕರಣ ದಾಖಲಾಗಿದೆ. ಶನಿವಾರ ಪತ್ತೆಯಾದ ಕೋರೋನಾ ಸೋಕಿತರ ಪಟ್ಟಿಯಲ್ಲಿ ಬೆಂಗಳೂರಿನ ಆಸ್ಪತ್ರೆಯ 32 ವರ್ಷದ ವೈದ್ಯರು ಕೂಡಾ ಒಬ್ಬರಾಗಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಕ್ವಾರಂಟೈನ್ನಲ್ಲಿಡಲಾಗಿದೆ. ಹಾಗೆಯೇ ಅವರು ಕಾರ್ಯನಿರ್ವಹಿಸುತ್ತಿದ್ದ ಆಸ್ಪತ್ರೆಯನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ. ವೈದ್ಯರ ಸಂಪರ್ಕದಲ್ಲಿದ್ದ 10 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್ನಲ್ಲಿಡಲಾಗಿದೆ. ಇನ್ನು ವೈದ್ಯರು ಬಹಳಷ್ಟು ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.