Home ರಾಜ್ಯ ಇತರೆ 10 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಡಾ.ಬಾಬುರಾವ್ ಇನ್ನಿಲ್ಲ

10 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಡಾ.ಬಾಬುರಾವ್ ಇನ್ನಿಲ್ಲ

ಕೊಪ್ಪಳ: ವಿಷ ಜಂತುಗಳ ಕಡಿತಕ್ಕೆ, ಮತ್ತು ವಿಷವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದವರಿಗೆ ಎಂತಹ ಸಂದರ್ಭದಲ್ಲೂ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡ್ತಿದ್ದ ಕೊಪ್ಪಳದ ಹಿರಿಯ ವೈದ್ಯ ಡಾ. ಪಿ. ಬಾಬುರಾವ್ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಕೇವಲ 10 ರೂಪಾಯಿ ಪಡೆದು ಚಿಕಿತ್ಸೆ ಕೊಡ್ತಿದ್ದ ಬಾಬುರಾವ್​ ಬಡವರ ಪಾಲಿಗೆ ದೇವರೇ ಆಗಿದ್ದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ವೈದ್ಯ ವೃತ್ತಿಯನ್ನು ಆರಂಭಿಸಿದ್ದ ಡಾ.ಬಾಬುರಾವ್ ಬಿ.ಎಸ್ಸಿ, ಎಂಬಿಬಿಎಸ್, ಇಡೀ ಹೈದರಾಬಾದ್ ಕರ್ನಾಟಕಕ್ಕೆ ಫುಲ್ ಫೆಮಸ್ ಡಾಕ್ಟರ್. 1975ರಲ್ಲಿ ಶ್ರೀರಾಮನಗರಕ್ಕೆ ಆಗಮಿಸಿದ ಬಾಬುರಾವ್​ ಅಂದಿನಿಂದ ಇಂದಿನವರೆಗೆ ಕೇವಲ 10 ರೂಪಾಯಿ ಮಾತ್ರ ಪಡೆದು ಚಿಕಿತ್ಸೆ ನೀಡ್ತಿದ್ರು. ಜನರು ಹುಬ್ಬಳ್ಳಿ ಧಾರವಾಡ,ರಾಯಚೂರಿನಿಂದ ಬಂದು ಇಲ್ಲಿ ಚಿಕಿತ್ಸೆ ಪಡೆದುಕೊಂಡು ಹೊಗ್ತಿದ್ರು. ಇದೀಗ ಅವರ ಅಗಲಿಕೆಯಿಂದ ಇಡೀ ಶ್ರೀರಾಮನಗರವೇ ಕಂಬನಿ‌ ಮಿಡಿಯತ್ತಿದೆ. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಾಬುರಾವ್ ಅವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಳುತ್ತಿದ್ದಾರೆ. ಶ್ರೀರಾಮನಗರಕ್ಕೆ‌ ಇಂತಹ ಮತ್ತೊಬ್ಬ ವೈದ್ಯರು ಬರಲಿ. ಬಾಬುರಾವ್ ಅವರ ಆತ್ಮಕ್ಕೆ‌ ಶಾಂತಿ ಸಿಗಲಿ. ಅವರು ಮತ್ತೆ ಹುಟ್ಟಿಬರಲಿ ಎಂದು ಎಲ್ಲರು ಆಶಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments