Home ರಾಜ್ಯ 'ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇಲ್ಲಿನ ಕಾನಕೇರಿ ನಿವಾಸಿಯಾಗಿರುವ ಸುಮಾರು 24 ವರ್ಷದ ಗರ್ಭಿಣಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಗು ಜನನದ ಮೊದಲೇ ಕರುಳ ಬಳ್ಳಿ ಹೊರ ಬಿದ್ದಿತ್ತು. ಕನಿಷ್ಟ 15 ನಿಮಿಷ ತಡವಾಗಿದ್ದರೂ ತಾಯಿ ಮತ್ತು ಮಗು ಪ್ರಾಣಾಪಾಯ ಎದುರಿಸಬೇಕಿತ್ತು. ತಮ್ಮ ಪ್ರಾಣವನ್ನು ಸಹ ಲೆಕ್ಕಿಸದ ವೈದ್ಯರ ತಂಡ ಗರ್ಭಿಣಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಿದ್ದಾರೆ. ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಸೋಂಕಿತ ಮಹಿಳೆಗೆ ಹೆರಿಗೆ ಮಾಡಿಸಲಾಗಿದ್ದು, ವೈದ್ಯರ ತಂಡಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಹೆರಿಗೆ ಮಾಡಿಸಿದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಜಿ. ಶ್ವೇತಾ, ಅರವಳಿಕೆ ತಜ್ಞೆ ಡಾ. ಎಂ. ರಜನಿ, ದಾದಿ ಹೀಮಾಮಣಿ, ಸಚಿನ್ ಮತ್ತು ಗಂಗಾ ಅವರ ವೈದ್ಯಕೀಯ ತಂಡಕ್ಕೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments