ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭ ಬಗ್ಗೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಬ್ರಿಟನ್ ವೈರಸ್ ಬಗ್ಗೆ ಸ್ಪಷ್ಟತೆ ಸಿಗುವವರೆಗೂ ಶಾಲೆ ಆರಂಭ ಮಾಡುವುದು ಬೇಡ ಎಂದು ವೈದ್ಯೆ ಡಾ.ಜಗದೀಶ್ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ.
ಬ್ರಿಟನ್ ವೈರಸ್ ನಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದರ ನಡುವೆ ಜನವರಿ 1 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗುತ್ತಾ? 10ನೇ ತರಗತಿ ಮತ್ತು ಸೆಕೆಂಡ್ ಪಿಯುಸಿ ತರಗತಿಗಳು ನಡೆಯುತ್ತವಾ? ಎಂದು ಕಾದುನೊಡಬೇಕಿದೆ.