Homeಕ್ರೀಡೆP.Cricket3ನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾಕ್ಕೆ ಡಬಲ್ ಶಾಕ್..!

3ನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾಕ್ಕೆ ಡಬಲ್ ಶಾಕ್..!

ಬೆಂಗಳೂರು: ಭಾರತ-ಆಸ್ಟ್ರೇಲಿಯಾ ನಡುವೆ ಸಿಡ್ನಿಯಲ್ಲಿ ನಡಿತಿರೋ 3ನೇ ಟೆಸ್ಟ್ ನಲ್ಲಿ ಭಾರತಕ್ಕೆ ಡಬಲ್ ಶಾಕ್ ಆಗಿದೆ. ಪಂದ್ಯದ ಮೇಲೆ ಪ್ರವಾಸಿ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೆ, ಇನ್ನೊಂದೆಡೆ ಟೀಂ ಇಂಡಿಯಾದ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಬ್ಯಾಟಿಂಗ್ ವೇಳೆ ಗಾಯಗೊಂಡಿದ್ದಾರೆ. ನಿನ್ನೆ 96 ರನ್ ಗೆ 2 ವಿಕೆಟ್ ಕಳೆದುಕೊಂಡಿದ್ದ ಭಾರತ ಇಂದು ಬ್ಯಾಟಿಂಗ್ ಮುಂದುವರಿಸಿ 244 ರನ್ ಗೆ ಆಲೌಟ್ ಆಗಿತ್ತು.

ಭಾರತದ ಪರ ಶುಬ್ಮನ್ ಗಿಲ್ ಮತ್ತು ಚೇತೇಶ್ವರ ಪೂಜಾರ ತಲಾ 50 ರನ್ ಸಿಡಿಸಿದ್ರು. ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 4 ವಿಕೆಟ್ ಪಡೆದು ಮಿಂಚಿದರು. ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 3ನೇ ದಿನದಾಟದ ಅಂತ್ಯಕ್ಕೆ 103 ರನ್ ಗೆ 2 ವಿಕೆಟ್ ಕಳೆದುಕೊಂಡಿದೆ. ಲಬುಷೇನ್ 47* ಮತ್ತು ಸ್ಟೀವ್ ಸ್ಮಿತ್ 29* ರನ್ ಸಿಡಿಸಿ 4ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾಗೆ 197 ರನ್ ಮುನ್ನಡೆ ಸಿಕ್ಕಂತಾಗಿದೆ. ಇದರೊಂದಿಗೆ ಒಂದು ರೀತಿ ಪಂದ್ಯದ ಮೇಲೆ ಆಸ್ಟ್ರೇಲಿಯಾ ಹಿಡಿತ ಸಾಧಿಸಿದಂತಾಗಿದೆ.

ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಬೇಕಿದೆ. ಆದರೆ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಗಾಯಗೊಂಡಿರೋದು ಕೂಡ ತಂಡದ ಟೆನ್ಷನ್ ಹೆಚ್ಚಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments