ಶಿವಮೊಗ್ಗ: ಪತಿ ಹಾಗೂ ಪತಿಯ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸವಿತಾ (31) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದು, ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ಪತಿ ಮತ್ತು ಅವರ ಕುಟುಂಬಸ್ಥರ ವಿರುದ್ಧ ಈ ಬಗ್ಗೆ ಸವಿತಾ ಕುಟುಂಬದವರು ಆರೋಪಿಸುತ್ತಿದ್ದು, ನಿನ್ನೆ ಮಧ್ಯಾಹ್ನ ತನ್ನ ತಾಯಿ ಬಳಿ ದೂರವಾಣಿಯಲ್ಲಿ ಚೆನ್ನಾಗಿಯೇ, ಯಾವುದೇ ಆತಂಕವಿಲ್ಲದೇ ಮಾತನಾಡಿದ್ದ ಸವಿತಾ, ಕರೆ ಮಾಡಿ ಒಂದು ಗಂಟೆ ಬಳಿಕ ಸಾವಿಗೀಡಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.