ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ ಘಟನೆ ಗದಗನಲ್ಲಿ ನಡೆದಿದೆ.
ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ಅಬ್ಬಿಗೇರಿ ಕ್ರಾಸ್ ಬಳಿ ಅಪಘಾತ ನಡೆದಿದ್ದು, ರೋಣದಿಂದ ಗದಗ ಮಾರ್ಗವಾಗಿ ಬರುತ್ತಿದ್ದ ಕಾರು ಪಲ್ಟಿಯಾಗಿದೆ. ಇನ್ನು ಅಪಘಾತವಾದ ಕೂಡಲೇ ಸ್ಥಳದಿಂದ ಕಾರನಲ್ಲಿದ್ದ ಗಾಯಾಳುಗಳು ನಾಪತ್ತೆಯಾಗಿದ್ದಾರೆ. ಗಾಯಾಳುಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಬಗ್ಗೆ ಸಂಪೂರ್ಣ ಮಾಹಿತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಗದಗ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.