Home ರಾಜ್ಯ ಕೊರೋನಾ ನಿಯಂತ್ರಣಕ್ಕೆ ` ಡ್ರೋನ್​ ` ಕಾರ್ಯಾಚರಣೆ ...

ಕೊರೋನಾ ನಿಯಂತ್ರಣಕ್ಕೆ ` ಡ್ರೋನ್​ ` ಕಾರ್ಯಾಚರಣೆ …

ಬೆಂಗಳೂರು :  ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯದಲ್ಲಿ  ಜೂನ್ 15 ರಿಂದ ಜುಲೈ 15ರ ಒಂದು ತಿಂಗಳ ಅವಧಿಯಲ್ಲಿ 40,040 ಪ್ರಕರಣಗಳು ದಾಖಲಾಗಿವೆ. 840 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.  ಈ ಕೇಸುಗಳಲ್ಲಿ ರಾಜಧಾನಿ ಬೆಂಗಳೂರಿನದ್ದೇ ಬಹುದೊಡ್ಡ ಪಾಲಿದೆ.

ನಿನ್ನೆ ಒಂದೇ ದಿನದಲ್ಲಿ ರಾಜ್ಯದಲ್ಲಿ 3, 176 ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬರೋಬ್ಬರಿ 1975 ಪ್ರಕರಣಗಳು ಬೆಂಗಳೂರಲ್ಲೇ ದಾಖಲಾಗಿವೆ. ಹೀಗೆ ಕೊರೋನಾ ದಿನೇ ದಿನೇ ಆತಂಕಕಾರಿಯಾಗಿ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ.

ಇದೀಗ ಬೆಂಗಳೂರಲ್ಲಿ ಕೊರೋನಾ ನಿಯಂತ್ರಣಕ್ಕೆ ಹೊಸ ಪ್ಲ್ಯಾನ್ ಮಾಡಲಾಗಿದೆ.  ಹೆಮ್ಮಾರಿಯ ಓಟಕ್ಕೆ ಬ್ರೇಕ್ ಹಾಕಲು ಡ್ರೋನ್​​​ ಸ್ಯಾನಿಟೈಸಿಂಗ್ ಮೊರೆ ಹೋಗಲಾಗುತ್ತಿದೆ. ಡ್ರೋನ್​​ ಗಳ ಮೂಲಕ ನಗರದಲ್ಲಿ ಸ್ಯಾನಿಟೈಸಿಂಗ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ದಕ್ಷಿಣ ವಲಯದಲ್ಲಿ 4 ಡ್ರೋನ್​​​​ಗಳ ಮೂಲಕ ಸಿಂಪಡನೆ ಮಾಡಲಾಗುತ್ತಿದೆ.  ಸಚಿವ ಆರ್. ಅಶೋಕ್  ಮತ್ತು ಸಂಸದ ತೇಜಸ್ವಿ ಸೂರ್ಯ ಈ ಡ್ರೋನ್​​ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments