Home ರಾಜ್ಯ ಕೋಟೆನಾಡಿಗೆ ಕೈ ಕೊಟ್ಟ ವರುಣ..! ಮಳೆಯಿಲ್ಲದೆ ಬಾಡಿದ ಬೆಳೆಗಳು..!

ಕೋಟೆನಾಡಿಗೆ ಕೈ ಕೊಟ್ಟ ವರುಣ..! ಮಳೆಯಿಲ್ಲದೆ ಬಾಡಿದ ಬೆಳೆಗಳು..!

ಚಿತ್ರದುರ್ಗ: ರೈತರ ಬೆಳೆಗಳಿಗೆ ತಕ್ಕಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಕೋಟೆ ನಾಡು ಚಿತ್ರದುರ್ಗದಲ್ಲಿ ಬೆಳೆಗಳು ಬಾಡುತ್ತಿದ್ದು, ಸಾವಿರಾರು ರೈತರು ಆತಂಕದಲ್ಲಿದ್ದಾರೆ.

ಒಂದು ವಾರದಿಂದ ಬಿಸಿಲು ಜೋರಾಗಿದ್ದು ಶೇಂಗಾ, ಮೆಕ್ಕೆಜೋಳ, ಇತರೆ ಬೆಳೆಗಳು ಫಸಲಿಗೆ ಬಂದು ನಿಂತಿವೆ. ಕಳೆದ ಎರಡ್ಮೂರು ವಾರಗಳಿಂದ ಮಳೆ ಬಾರದ ಕಾರಣ ಬೆಳೆಗಳು ಒಣಗುತ್ತಿರುವುದು ನೋಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಅನ್ನುವ ಪರಿಸ್ಥಿತಿ ಎದುರಾಗತೊಡಗಿದೆ.

ಜಿಲ್ಲೆಯಲ್ಲಿ ಕಳೆದ ತಿಂಗಳು ಮುಂಗಾರು ಮಳೆ ಅಬ್ಬರಿಸಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಅದರಂತೆ ರೈತರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಸಾಲ ಸೂಲ ಮಾಡಿಕೊಂಡು ಶೇಂಗಾ ಬೀಜ, ಗೊಬ್ಬರ, ರಾಸಾಯನಿಕ ಸಿಂಪಡಣೆ ಖರೀದಿ ಮಾಡಿಕೊಂಡು ಬೀಜ ಬಿತ್ತನೆ ಮಾಡಿದ್ದಾರೆ.

ಶೇಂಗಾ, ಮೆಕ್ಕೆಜೋಳಕ್ಕೆ ಎಡೆಕುಂಟೆ ಹೊಡೆದು ಗೊಬ್ಬರ ಹಾಕಿದ್ದಾರೆ. ಶೇಂಗಾ ಹೂಡು ಹಿಡಿಯುವುದು, ಹಾಗೂ ಮೆಕ್ಕೆಜೋಳ ತೆನೆ ಹೊಡೆಯುವ ಸಮಯವಾಗಿದ್ದು ಈ ಸಮಯಕ್ಕೆ ಮಳೆ ಬೇಕಾಗಿದೆ ಆದರೆ ಇತ್ತ ಮಳೆ ಕೈ ಕೊಟ್ಟಿದೆ. ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಮೊಳಕಾಲ್ಮೂರು, ಹೊಳಲ್ಕೆರೆ ತಾಲ್ಲೂಕಿನಲ್ಲಿ ಸಹ ಮಳೆ ಬಾರದೇ ಇರುವುದು ನೋಡಿದರೆ ಅನ್ನದಾತರು ಸಂಕಷ್ಟಕ್ಕೆ ಗುರಿಯಾಗುವ ಸಾಧ್ಯತೆ ಕಂಡು ಬಂದಿದೆ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments