Home ಸಿನಿ ಪವರ್ ವಿಜಿಯಿಂದ ಮುಚ್ಚಳಿಕೆ ಬರೆಸಿಕೊಂಡು ವಾರ್ನಿಂಗ್ ಮಾಡಿದ ಅಣ್ಣಾಮಲೈ..!

ವಿಜಿಯಿಂದ ಮುಚ್ಚಳಿಕೆ ಬರೆಸಿಕೊಂಡು ವಾರ್ನಿಂಗ್ ಮಾಡಿದ ಅಣ್ಣಾಮಲೈ..!

ದಕ್ಷಣ ವಲಯ ಡಿಸಿಪಿ ಅಣ್ಣಾಮಲೈ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಯಿಂದ ಮುಚ್ಚಳಿಕೆ ಬರೆಸಿಕೊಂಡು, ವಾರ್ನಿಂಗ್ ಮಾಡಿ ಕಳುಹಿಸಿಕೊಟ್ಟಿದ್ದಾರೆ. ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡ್ತಿದ್ದಾರೆ. ಇವ್ರ ಕುಟುಂಬದಿಂದ ಸಮಾಜದ ಶಾಂತಿ ಹಾಳಾಗ್ತಿದೆ ಅಂತ ಅಣ್ಣಾಮಲೈ ಅವ್ರ ಸೂಚನೆ ಮೇರೆಗೆ ವಿಜಿ ಹಾಗೂ ನಾಗರತ್ನ ವಿರುದ್ಧ ಗಿರಿನಗರ ಪೊಲೀಸರು ಸಿಆರ್ ಪಿಸಿ 107 ಹಾಕಿದ್ರು. ಈ ಹಿನ್ನೆಲೆಯಲ್ಲಿ ಇಂದು ವಿಜಯ್ ಅಣ್ಣಾಮಲೈ ಮುಂದೆ ವಿಚಾರಣೆ ಹಾಜರಾಗಿದ್ರು. ಅಣ್ಣಾಮಲೈ ವಿಜಿಗೆ ವಾರ್ನಿಂಗ್ ಮಾಡಿದ್ದಾರಂತ ತಿಳಿದುಬಂದಿದೆ. ಇದು ಬೆಂಗಳೂರು ಹಾಗೂ ಸಾರ್ವಜನಿಕ ಸಮಸ್ಯೆಯಲ್ಲ. ಹೀಗಾಗಿ ನಾನು ದುನಿಯಾ ವಿಜಯ್ ವಿಷ್ಯವಾಗಿ ಏನೂ ಮಾತಡಲ್ಲ. ವಿಜಿಯಿಂದ 5 ಲಕ್ಷ ರೂ ಶ್ಯೂರಿಟಿ ಬರೆಸಿಕೊಂಡಿದ್ದೀನಿ. ವಿಜಯ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಅವ್ರ ಅಪ್ಪ-ಅಮ್ಮನಿಗೆ ವಯಸ್ಸಾಗಿದೆ. ಹೀಗಾಗಿ ಜಸ್ಟ್ ವಾರ್ನಿಂಗ್ ಮಾಡಿದ್ದೇನೆ. ಇನ್ನೊಂದು ಸಲ ಶಾಂತಿ ಕದಡೋ ಕೆಲಸ ಮಾಡಿದ್ರೆ ಕಾನೂನು ಕ್ರಮ ಜರುಗಿಸ್ತೀನಿ ಅಂದಿದ್ದಾರಂತೆ. ನಾಗರತ್ನ ಎಲ್ಲಿದ್ದಾರೋ ಇರಲಿ. ಅದೇನು ಮೇಜರ್ ಸಮಸ್ಯೆಯಲ್ಲ. ಅವ್ರು ಬಂದ ಮೇಲೇ ವಿಚಾರಣೆ ನಡೆಸ್ತೀವಿ ಅಂತಲೂ ಅಣ್ಣಾಮಲೈ ಹೇಳಿದ್ದಾರೆ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments