Home ರಾಜ್ಯ ಡೈವರ್ಸ್ ಗೆ ಅರ್ಜಿ ಸಲ್ಲಿಸಿದ ದುನಿಯಾ ವಿಜಿ

ಡೈವರ್ಸ್ ಗೆ ಅರ್ಜಿ ಸಲ್ಲಿಸಿದ ದುನಿಯಾ ವಿಜಿ

ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಮ್ಮ ಮೊದಲ ಪತ್ನಿ ನಾಗರತ್ನಗೆ ಡೈವರ್ಸ್ ನೀಡಲು ಡಿಸೈಡ್ ಮಾಡಿದ್ದಾರೆ. ಇಂದು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ವಿಜಿ ಅರ್ಜಿ ಸಲ್ಲಿಸಿದ್ದಾರೆ. ಕೌಟುಂಬಿಕ ಕಾರಣವೊಡ್ಡಿ ವಿಜಿ ಡೈವರ್ಸ್ ಗೆ ಅರ್ಜಿ ಸಲ್ಲಿಸುತ್ತಿರೋದು ಇದು ಎರಡನೇ ಬಾರಿ.  ಈ ಹಿಂದೆಯೂ ಒಮ್ಮೆ ವಿಜಿ ಡೈವರ್ಸ್ ಗೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಮನಸ್ಸು ಬದಲಾಯಿಸಿ ರಾಜಿ ಮಾಡ್ಕೊಂಡು ವಾಪಸ್ಸು ತಗೊಂಡಿದ್ರು.

ಇತ್ತೀಚೆಗೆ ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣದ ಆರೋಪದ ಮೇಲೆ ವಿಜಿ ಜೈಲು ಸೇರಿದ್ರು. ಆಗಿನಿಂದ ಇವರ ಫ್ಯಾಮಿಲಿ ಫೈಟ್ ಮತ್ತೆ ಜೋರಾಗಿ ಬೀದಿಗೆ ಬಂದಿದೆ. ಎರಡನೇ ಹೆಂಡ್ತಿ ಕೀರ್ತಿಗೌಡ ಮತ್ತು ನಾಗರತ್ನ ಅವ್ರ ಕಿತ್ತಾಟ ಜಾಸ್ತಿ ಆಗಿದ್ದು, ವಿಜಿ ಸಿನಿಮಾಕ್ಕಿಂತ ಹೆಚ್ಚಾಗಿ ಈ ಫ್ಯಾಮಿಲಿ ಪ್ರಾಬ್ಲಮ್ ಕಡೆಗೇ ಹೆಚ್ಚು ಗಮನ ಕೊಡ್ಬೇಕಾಗಿ ಬಂದಿದೆ. ಈ ಕೌಟುಂಬಿಕ ಕಲಹದಿಂದ ನೊಂದಿರೋ ವಿಜಿ ಡೈವರ್ಸ್ ಗೆ ಮುಂದಾಗಿರೋದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments