ಬೆಂಗಳೂರು: ದೇಶದಲ್ಲಿ ಕೊರೋನಾ ಹಾವಳಿ ಬಳಿಕ ಒಂದಾದ ಮೇಲೆ ಒಂದರಂತೆ ಚಂಡಮಾರುತಗಳು ಅಪ್ಪಳಿಸುತ್ತಲೇ ಇದೆ. ಆಂಫಾನ್ ಚಂಡಮಾರುತ ಅಪ್ಪಳಿಸಿ ಕೆಲವು ದಿನಗಳು ಕಳೆದಿರುವಾಗಲೇ ಇದೀಗ ನಿಸರ್ಗ ಚಂಡಮಾರುತ ಅಪ್ಪಳಿಸಿದೆ. ಈಗಾಗಲೇ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಚಂಡಮಾರುತ, ಇದರಿಂದ ಮಹಾರಾಷ್ಟ್ರದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆಯಿದೆ. ಆದರೆ ಇದರಿಂದ ಕರ್ನಾಟಕಕ್ಕೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರ ನಿರ್ದೇಶಕ ಡಾ.ಜಿ.ಎಸ್ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.
ನಿಸರ್ಗ ಚಂಡಮಾರುತದಿಂದ ರಾಜ್ಯದಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಇಂದು ಹಾಗೂ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಪ್ರವಾಹ ಸೃಷ್ಟಿ ಹಾಗೂ ಭೂಕುಸಿತವಾಗುವುದಿಲ್ಲ. ಬದಲಾಗಿ ಈ ಚಂಡಮಾರುತದಿಂದ ಕೆಲವು ಡ್ಯಾಂಗಳು ತುಂಬಲಿವೆ. ಹಾಗೆಯೇ ರಾಜ್ಯಕ್ಕೆ ಬಿತ್ತನೆಗೆ ಬೇಕಾಗುವಷ್ಟು ಮಳೆಯಾಗುತ್ತದೆ.
ನಿಸರ್ಗ ಚಂಡಮಾರುತದಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಭಾಗಕ್ಕೆ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, 60 ರಿಂದ 100 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
zithromax 250mg online
zithromax 250 mg online