Home ರಾಜ್ಯ ಕೈ ಮುಖಂಡರು ತಂಗಿದ್ದ ಹೋಟೆಲ್​ನಲ್ಲಿ ಸಿಕ್ತು 50 ಅರಿಶಿಣ ಕೊಂಬು, ಶಿವಳ್ಳಿ ಭಾವಚಿತ್ರ..!

ಕೈ ಮುಖಂಡರು ತಂಗಿದ್ದ ಹೋಟೆಲ್​ನಲ್ಲಿ ಸಿಕ್ತು 50 ಅರಿಶಿಣ ಕೊಂಬು, ಶಿವಳ್ಳಿ ಭಾವಚಿತ್ರ..!

ಹುಬ್ಬಳ್ಳಿ: ನಗರದಲ್ಲಿ ಕಾಂಗ್ರೆಸ್​ ಮುಖಂಡರು ತಂಗಿದ್ದ ಹೋಟೆಲ್​ ರೂಂ ಮೇಲೆ ಚುನಾವಣಾ ಆಯೋಗ ದಾಳಿ ನಡೆಸಿದೆ. ದಾಳಿ ನಡೆಸಿದ ಸಂದರ್ಭ ಬಂಗಾರ ಬಣ್ಣ ಲೇಪಿತ ಅರಿಶಿನ ಕೊಂಬು, ಶಿವಳ್ಳಿ ಭಾವಚಿತ್ರಗಳು ಪತ್ತೆಯಾಗಿವೆ.

ಚುನಾವಣೆಯಲ್ಲಿ ಡಿಕೆಶಿ ಹಣದ ಹಂಚುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಬಿಜೆಪಿ ದೂರಿನ‌ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಚುನಾವಣಾ ಆಯೋಗದ ಅಧಿಕಾರಿಗಳು ಕಾಟನ್ ಕೌಂಟಿ ಕ್ಲಬ್​ನ ರೂಮ್​ ನಂ. 307ರಲ್ಲಿ ದಾಳಿ ನಡೆಸಿದ್ದರು. ಈ ಸಂದರ್ಭ ಕುಂದಗೋಳದ 51 ರಿಂದ 52ರ ವರೆಗಿನ ಬೂತ್ ನಂಬರ್ ಮತದಾರರ ಪಟ್ಟಿ ಲಭ್ಯವಾಗಿದೆ. ಕಾಂಗ್ರೆಸ್ ಮುಖಂಡ ಶಿವಕುಮಾರ ಗೀಕಾವಿ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕುಂದಗೋಳ ಉಪಚುನಾವಣೆ ಹಿನ್ನೆಲೆ, ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ‌ ಕಣ್ಣಿರಿಸಿದ್ದು, ದಾಳಿಯ ನಂತರ ಕಾಂಗ್ರೆಸ್ ಮುಖಂಡನ‌ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಮತದಾರರನ್ನು ಸೆಳೆಯಲು ಆಮಿಷ ಒಡ್ಡಿದ ಹಿನ್ನೆಲೆ ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments